• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಮಾಜಕ್ಕೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ | ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಕರೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 20, 2026
in ಶಿವಮೊಗ್ಗ
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ
Share on FacebookShare on TwitterShare on WhatsApp
ಶಿವಮೊಗ್ಗ: ಸಮಾಜದಲ್ಲಿ ಗೋಡೆಗಳನ್ನು ಕಟ್ಟುವ ಬದಲಿಗೆ, ವಿಭಜನೆಗಳಾಚೆಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಕರೆ ನೀಡಿದರು.
ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶನಿವಾರ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಪದವಿ ಪ್ರಮಾಣಪತ್ರ ಪ್ರದಾನ ಕಾರ್ಯಕ್ರಮ ‘ನ್ಯಾಯದೀಕ್ಷಾ’ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ > ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು
ಇಂದು ಭೌತಿಕ ಗೋಡೆಗಳಿಗಿಂತ, ಕಣ್ಣಿಗೆ ಕಾಣದ ಮಾನಸಿಕ ಮತ್ತು ಸಾಮಾಜಿಕ ಗೋಡೆಗಳು ಮನುಷ್ಯರನ್ನು ಹೆಚ್ಚು ದೂರ ಮಾಡುತ್ತಿವೆ. ಧರ್ಮ ಎಂಬ ಪದವನ್ನು ಯಾವುದೇ ಸೀಮಿತ ಅರ್ಥದಲ್ಲಿ ನೋಡಬಾರದು. ಧರ್ಮ ಎಂದರೆ ವಿಭಜನೆ ಅಲ್ಲ, ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣದ ಮೌಲ್ಯವಾಗಿ ಅರ್ಥೈಸಬೇಕು ಎಂದು ಹೇಳಿದರು.
ವಕೀಲರಾಗಿ ಹೊರಹೊಮ್ಮುತ್ತಿರುವ ಯುವ ಸಮೂಹ ನಿಮ್ಮ ತಂದೆ ತಾಯಿಗಳ ಕನಸುಗಳನ್ನು ಸಾಕಾರ ಮಾಡುತ್ತಿದ್ದಿರ ಎನ್ನುವ ಜವಾಬ್ದಾರಿ ಇರಲಿ. ಬಡತನದಿಂದ ಉದರ ಪೋಷಣೆಯೊಂದೆ ಅನಿವಾರ್ಯವಿದ್ದ ಕಾಲದಲ್ಲಿ, ತಮಗೆ ಸಿಗದ ಅವಕಾಶವನ್ನು, ತಮ್ಮ ಮಕ್ಕಳ ಮೂಲಕ ಯಶಸ್ವಿಗೊಳಿಸುವ ಪೋಷಕರ ಆಶಯಕ್ಕೆ ಸದಾ ಬೆಂಬಲವಾಗಿರಿ. ಅವರನ್ನು ಗೌರವಿಸುವಂತಹ ಮೊದಲ ದೀಕ್ಷೆ ಪಡೆಯಿರಿ.
ಕಾನೂನಿನ ಪದವಿಯ ಜೊತೆಗೆ, ಸಮಾಜಮುಖಿಯಾಗಿ ಕಲಿತ ಜ್ಞಾನವನ್ನು ತಲುಪಿಸುವುದು ಕೂಡ ಒಂದು ದೊಡ್ಡ ಹೊಣೆಗಾರಿಕೆ. ಏನಾದರಾಗು, ಮೊದಲು ಮಾನವನಾಗು ಎಂಬುದು ಕಾನೂನು ದೀಕ್ಷೆಯ ಮೊದಲ ಪಾಠವಾಗಬೇಕು.
ಇದನ್ನೂ ಓದಿ > ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು
ಮಣ್ಣಿನಲ್ಲಿರುವ ಚಿನ್ನದ ನಿಕ್ಷೇಪ ಆಭರಣದ ರೂಪ ಪಡೆಯಲು ಸಾಕಷ್ಟು ಸಂಸ್ಕರಣಾ ಪಕ್ರಿಯೆಬೇಕು. ವಿದ್ಯಾರ್ಥಿಗಳು ಕೂಡ ಮಣ್ಣಿನಲ್ಲಿರುವ ಚಿನ್ನವಿದ್ದಂತೆ. ಅವರನ್ನು ಸಂಸ್ಕರಿಸಿ, ಪುಟವಿಟ್ಟ ಚಿನ್ನದಂತೆ ಪದವಿಧರರಾಗಿ ರೂಪಿಸಿದ ಶ್ರೇಯಸ್ಸು ವಿದ್ಯಾಸಂಸ್ಥೆಯದಾಗಿದೆ. ಇದೀಗ ಯಾವ ಆಭರಣಕಾರನ ಕೈಯಲ್ಲಿ ಸಿಕ್ಕಿ, ಜೀವನಾನುಭವದ ಹೆಚ್ಚು ಪೆಟ್ಟು ತಿನ್ನುತ್ತಿರ, ಆಗ ಹೆಚ್ಚು ಹೊಳೆಯಲು ಪ್ರಾರಂಭಿಸುತ್ತಿರಿ ಎಂಬ ವಾಸ್ತವತೆಯ ಪ್ರಜ್ಞೆ ಬೆಳೆಸಿಕೊಳ್ಳಿ. ಅದುವೆ ದೀಕ್ಷೆಯ ಮತ್ತೊಂದು ಹಂತ ಎಂದು ಹೇಳಿದರು.
ವಿವಿಧ ಪವಿತ್ರ ಗ್ರಂಥಗಳು ನಮ್ಮ ಮನೆಯ ದೇವರ ಮನೆಯಲ್ಲಿರಲಿ, ಅದರೇ ಮನೆಯ ಹೊಸಲು ದಾಟಿದ ಕೂಡಲೆ ಎಲ್ಲರನ್ನೂ ಒಟ್ಟುಗೂಡಿಸುವ ಪವಿತ್ರ ಗ್ರಂಥವಾಗುವುದು ಭಾರತದ ಸಂವಿಧಾನ ಮಾತ್ರ. ಸಮಾಜದ ಪ್ರತಿಯೊಬ್ಬ ಪ್ರಜೆಯು ಭಾರತದ ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ. ಅದು ನಮ್ಮೆಲ್ಲರನ್ನು ಭದ್ರಪಡಿಸಿದೆ‌. ಎಲ್ಲರೂ ಸಂವಿಧಾನವನ್ನು ಎತ್ತಿ ಹಿಡಿಯುವ, ಅದರ ಅಡಿಯಲ್ಲಿ ರೂಪಿತವಾದ ಕಾನೂನಿನ ಮೂಲಕ ಜವಾಬ್ದಾರಿಯುತವಾಗಿ ಸಾಗುವ ಪ್ರಜ್ಞೆ ಬೇಕು.
ರಾಜ ವಿಕ್ರಮಾದಿತ್ಯನ ಆಳ್ವಿಕೆಯಲ್ಲಿ ಪ್ರಜೆಗಳಿಗೆ ತ್ವರಿತ ಮತ್ತು ನಿಷ್ಪಕ್ಷಪಾತ ನ್ಯಾಯವನ್ನು ಒದಗಿಸಲು ನ್ಯಾಯದ ಗಂಟೆಯ ವ್ಯವಸ್ಥೆ ಇತ್ತು. ಕಾಲ ಬದಲಾದಂತೆ ಹಣಕಾಸು, ಆಧುನಿಕತೆ ಹಾಗೂ ವಿವಿಧ ಸಾಮಾಜಿಕ ಬದಲಾವಣೆಗಳ ಪರಿಣಾಮವಾಗಿ, ಮೌಲ್ಯಾಧಾರಿತ ನ್ಯಾಯ ವ್ಯವಸ್ಥೆಯ ಬಗ್ಗೆ ಜನರ ದೃಷ್ಟಿಕೋನ ಬದಲಾಗುತ್ತಿರುವುದು ಕಳವಳಕಾರಿಯಾಗಿದೆ.
ಸಮಾಜದಲ್ಲಿ ಈಗಾಗಲೇ ಅನೇಕರು ತಿಪ್ಪೆ ಹಾಕಿದ್ದಾರೆ. ಸಾಧ್ಯವಾದರೆ ತಿಪ್ಪೆಯನ್ನು ಶುದ್ದಿಕರಿಸಲು ಪ್ರಯತ್ನಿಸಿ, ಮತ್ತಷ್ಟು ನಿಮ್ಮ ಮನೆಯ ಕಸವನ್ನು ಹಾಕಬೇಡಿ. ಹಾಗಾಗಿಯೇ ಎಲ್.ಎಲ್.ಬಿ ಎಂಬ ಪದವಿ ಹಿಡಿದು, ಸಮಾಜದ ಶಿಕ್ಷಕರಾಗುವ ಮೂಲಕ, ಬಡವರಿಗೆ, ದೀನ ದಲಿತರಿಗೆ ಮೇಲೆತ್ತುವ ಸೇನಾನಿಗಳು ನೀವಾಗಿ. ಕಲಿತ ಪ್ರತಿ ಅಕ್ಷರವನ್ನು ದೀಕ್ಷಾ ಪೂರ್ವಕವಾಗಿ ಮುನ್ನಡೆಸುವ ದೂರದೃಷ್ಟಿ ಪಡೆಯಿರಿ ಎಂದು ಕಿವಿಮಾತು ಹೇಳಿದರು.
ಇದನ್ನೂ ಓದಿ > ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ನವೀಕೃತ ಕಟ್ಟಡ ಲೋಕಾರ್ಪಣೆ

ಪಂಚೆ ಉಡುವ ನ್ಯಾಕ್ ಕಲಿಯಿರಿ

ಪುರುಷರು ಪಂಚೆ ಉಡುವ ನ್ಯಾಕ್ ಕಲಿತುಕೊಳ್ಳಿ. ನಾನು ಎಷ್ಟು ಹೊತ್ತಾದರು ಪಂಚೆಯಲ್ಲಿ ಇರಬಲ್ಲೆ, ಫುಟ್ ಬಾಲ್ ಕೂಡ ಆಡಬಲ್ಲೆ ಎಂದು ನ್ಯಾಯಮೂರ್ತಿಗಳು ನಗೆ ಚಟಾಕಿ ಹಾರಿಸಿದರು.

ಗೌನ್ ಬದಲು ಶಲ್ಯ: ಸಂಸ್ಕೃತಿಯ ನ್ಯಾಯಧೀಕ್ಷೆ

ಸಾಮಾನ್ಯವಾಗಿ ಪದವಿ ಪ್ರಮಾಣಪತ್ರ ಪ್ರದಾನ ಸಮಾರಂಭದಲ್ಲಿದ್ದ ಗೌನ್ ಸಂಸ್ಕೃತಿಗೆ ತೆರೆ ಎಳೆದ ವಿದ್ಯಾರ್ಥಿಗಳು, ಶಲ್ಯದೊಂದಿಗೆ ನ್ಯಾಯದೀಕ್ಷೆ ಪಡೆದು ಸಂಭ್ರಮಿಸಿದರು. ಅತಿಥಿಗಳಾಗಿ ಭಾಗವಹಿಸಿದ್ದ ನ್ಯಾಯಮೂರ್ತಿಗಳು ಸೇರಿದಂತೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು ಶರ್ಟು, ಪಂಚೆ, ಮೈಸೂರು ಪೇಟ ಹಾಗೂ ವಿಶೇಷ ಶಲ್ಯದಲ್ಲಿ ಮಿಂಚಿದರು. ಜೊತೆಯಲ್ಲಿ ಶಾಸ್ತ್ರೀಯ ಸಂಗೀತದ ಹಿನ್ನೆಲೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿತ್ತು.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ನಮ್ಮ ವಿದ್ಯಾಸಂಸ್ಥೆಯ ಅನೇಕರು ನ್ಯಾಯಾಧೀಶರಾಗಿ ಕಾನೂನು ಕ್ಷೇತ್ರದ ಅನೇಕ ಉನ್ನತ ಹುದ್ದೆಗಳಲ್ಲಿ ಅಲಂಕರಿಸಿದ್ದಾರೆ. ವಕೀಲರಾಗುವ ನೀವು ವೃತ್ತಿ ಜೀವನದಲ್ಲಿ ಕುಟುಂಬ ವ್ಯವಸ್ಥೆಗೆ ಹೆಚ್ಚು ಆದ್ಯತೆ ನೀಡಿ. ವಿದ್ಯೆ ಮನುಷ್ಯನಿಗೆ ಆಕಾರ ನೀಡಬೇಕು ವಿನಃ ಅಹಂಕಾರ ನೀಡಬಾರದು. ಸುಶಿಕ್ಷಿತರಾಗುವ ಜೊತೆಗೆ ಸುಸಂಸ್ಕೃತರಾಗಿ ಎಂದು ಹೇಳಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು. ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಅನಲಾ ಅಧ್ಯಕ್ಷತೆ ವಹಿಸಿದ್ದರು.
Tags: 'Nyayadiksha' program for law students at CBR Collegekannada newskannada news livelatest newslaw students at CBR Collegemalnad newsshimogashivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

Next Post

ಶಿವಮೊಗ್ಗ, ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!, ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ, ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!, ಏನಿದು ಪ್ರಕರಣ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL