ಶಿವಮೊಗ್ಗ: ತೀರ್ಥಹಳ್ಳಿಯ ಮಂಡಗದ್ದೆಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ ಸ್ಥಳದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, 1,888.25 ಕೆ.ಜಿ ತೂಕದ ಅಕ್ಕಿ ಹಾಗೂ ಡಿಜಿಟಲ್ ತೂಕದ ಯಂತ್ರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಂದಾಯ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಓಮ್ನಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ತಹಶೀಲ್ದಾರ್ ಎಸ್.ರಜಿತ್ ಸೂಚನೆಯ ಮೇರೆಗೆ ಆಹಾರ ಇಲಾಖೆಯ ಶಿರಸ್ತೇದಾರ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.
ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿ ಸೈಯದ್ ಗೌಸ್ ವಿರುದ್ಧ ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ
-
ಇದನ್ನೂ ಓದಿ > ಶಿವಮೊಗ್ಗ, 25 ಕಡೆ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!
ಇದನ್ನೂ ಓದಿ > ಹಾಡೋನಹಳ್ಳಿಯಲ್ಲಿ 80 ಲೋಡ್ ಮರಳು ಪತ್ತೆ!














