ಶಿವಮೊಗ್ಗ : ನಗರದಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್ಪಾತ್ಗಳನ್ನು ತೆರವುಗೊಳಿಸುವ ‘ಆಪರೇಷನ್ ಫುಟ್ಪಾತ್’ ಕಾರ್ಯಾಚರಣೆ ಮುಂದುವರೆದಿದೆ. ಇಂದು ನಗರದ ಪ್ರಮುಖ ರಸ್ತೆಯಾದ ಜೈಲ್ ರಸ್ತೆಯಲ್ಲಿ ಸಂಚಾರಿ ಪೊಲೀಸ್ ಠಾಣೆಯ ಸಿಪಿಐ ದೇವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಇದನ್ನೂ ಓದಿ > > ಜೀರೋ ಟ್ರಾಫಿಕ್ ಇದ್ದರೂ ಉಳಿಯದ ಜೀವ, ಮೂರುವರೆ ತಿಂಗಳ ಮಗು ಸಾವು!
ಫುಟ್ಪಾತ್ ಆಕ್ರಮಿಸಿಕೊಂಡಿದ್ದ ಅಂಗಡಿ-ಮುಂಗಟ್ಟುಗಳು, ಶೇಡ್ಗಳು ಹಾಗೂ ತಳ್ಳುಗಾಡಿಗಳನ್ನು ಪೊಲೀಸರು ತೆರವುಗೊಳಿಸಿದರು. ಅಲ್ಲದೆ, ಫುಟ್ಪಾತ್ ಮೇಲೆ ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್ ಮಾಡಿದ್ದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ > > ಸಾಗರ ತಹಶೀಲ್ದಾರ್ ಕಾರ್ಯಾಚರಣೆ, ಜಂಬಿಟ್ಟಿಗೆ ತುಂಬಿದ್ದ ಲಾರಿ ಸೀಜ್
ಫುಟ್ಪಾತ್ ಆಕ್ರಮಿಸಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವ್ಯಾಪಾರಿಗಳಿಗೆ ಸಿಪಿಐ ದೇವರಾಜ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ > > ಸಿನಿಮೀಯ ಶೈಲಿಯಲ್ಲಿ ಪೊಲೀಸರ ಚೇಸಿಂಗ್, ಕಾರು ಬಿಟ್ಟು ಕಾಡಿಗೆ ನುಗ್ಗಿದ ದನಗಳ್ಳರು!
ಸಾರ್ವಜನಿಕರ ಹಿತದೃಷ್ಟಿಯಿಂದ ಸಂಚಾರಿ ಪೊಲೀಸರು ಕೈಗೊಂಡಿರುವ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.














