• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 8, 2026
in ಸಾಗರ
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!
Share on FacebookShare on TwitterShare on WhatsApp

ಸಾಗರ : ಬೇಸೂರು ಅಣು ವಿದ್ಯುತ್ ಸ್ಥಾವರ ಖಂಡಿಸಿ ಗುರುವಾರ ಜನ ಹೋರಾಟ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಶಿವಪ್ಪನಾಯಕ ವೃತ್ತದಿಂದ ಹೊರಟ ಬೃಹತ್ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಗರದ ಗಾಂಧಿ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆ ನಂತರ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ >  ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಬೇಸೂರು ಅಣು ವಿದ್ಯುತ್ ಸ್ಥಾವರ ಯಾವುದೇ ಕಾರಣಕ್ಕೂ ಬೇಸೂರು ಮಾತ್ರವಲ್ಲದೇ, ನಮ್ಮ ರಾಜ್ಯದಲ್ಲಿಯೆ ಬೇಡ. ನಾಡಿಗೆ ಬೆಳಕು ನೀಡಲು ಮೂರು ಬಾರಿ ನಿರಾಶ್ರಿತರಾದ ಜನರ ಮೇಲೆ ಮತ್ತೆಮತ್ತೆ ಹೊಸಹೊಸ ಯೋಜನೆ ಹೇರುವುದನ್ನು ಸಹಿಸುವುದಿಲ್ಲ. ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ. ಯಾವುದೇ ಕಾರಣಕ್ಕೂ ಅಣು ಸ್ಥಾವರವಾಗಲು ಬಿಡುವುದಿಲ್ಲ ಎಂದು ಅವರು ರಾಜ್ಯ ಸರ್ಕಾರದ ಹಂತದಲ್ಲಿ ಸ್ಥಾವರಕ್ಕೆ ಭೂಮಿ ಮಂಜೂರು ಆಗದಂತೆ ನಾನು ನೋಡಿಕೊಳ್ಳುತ್ತೇನೆ. ಕೇಂದ್ರ ಹಂತದಲ್ಲಿ ಯೋಜನೆಗೆ ಅನುಮತಿ ನೀಡದಂತೆ ಸಂಸದ ಬಿ.ವೈ.ರಾಘವೇಂದ್ರ ಒತ್ತಡ ಹಾಕಬೇಕು. ಅಣು ವಿದ್ಯುತ್ ಸ್ಥಾವರವಾದರೆ ಈ ಭಾಗ ಸಂಪೂರ್ಣ ನಾಶವಾಗುತ್ತದೆ. ಜನರಿಗೆ ಮಾರಕವಾಗುವ ಯಾವುದೇ ಯೋಜನೆಯನ್ನು ಅನುಷ್ಟಾನಕ್ಕೆ ನಾನು ಬಿಡುವುದಿಲ್ಲ. ಇದಕ್ಕಾಗಿ ಎಂತಹ ತ್ಯಾಗಕ್ಕೆ ಬೇಕಾದರೂ ಸಿದ್ದನಿದ್ದೇನೆ ಎಂದು ಹೇಳಿದರು.

ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, ಅಣು ವಿದ್ಯುತ್ ಸ್ಥಾವರವಾದರೆ ಕೇವಲ ಬೇಸೂರಿಗೆ ಮಾತ್ರ ತೊಂದರೆ ಎನ್ನುವ ಮನೋಭಾವದಿಂದ ಜನರು ಹೊರಗೆ ಬರಬೇಕು. ಮಲೆನಾಡು ಪ್ರದೇಶದಲ್ಲಿ ಈ ಯೋಜನೆ ಸಾಧುವಲ್ಲ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನದಟ್ಟು ಮಾಡಿಕೊಡಬೇಕಾಗಿದೆ. ಸುಮಾರು ನಾಲ್ಕು ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಲು ಚಿಂತನೆ ನಡೆದಿದ್ದು, ಇದಕ್ಕೆ 2ಸಾವಿರ ಎಕರೆ ಭೂಮಿ ಕೇಳಿದ್ದಾರೆ. ಆದರೆ ಇಷ್ಟೊಂದು ವಿದ್ಯುತ್ ಸರಬರಾಜು ಮಾಡಲು ವಿದ್ಯುತ್ ತಂತಿ ಎಳೆಯಲು ಸಾವಿರಾರು ಎಕರೆ ಅರಣ್ಯ ನಾಶವಾಗುತ್ತದೆ. ಈಗಾಗಲೆ ಸಂಸದರು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಹ ಅಣು ಸ್ಥಾವರ ಸ್ಥಾಪನೆ ಕುರಿತ ಮಾಹಿತಿ ನೀಡಲಾಗಿದ್ದು, ಅವರ ಮೂಲಕ ಸಹ ಕೇಂದ್ರದ ಮೇಲೆ ಒತ್ತಡ ಹೇರಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ >   ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಹೋರಾಟ ಸಮಿತಿ ಅಧ್ಯಕ್ಷ ಬಿ.ಎ.ಇಂದೂಧರ ಬೇಸೂರು ಮಾತನಾಡಿ, ಯಾವುದೇ ಕಾರಣಕ್ಕೂ ಬೇಸೂರು ಭಾಗದಲ್ಲಿ ಅಣು ವಿದ್ಯುತ್ ಸ್ಥಾವರ ಬೇಡ ಎಂದು ಸರಣಿ ಸಭೆ ನಡೆಸಿ ಹೋರಾಟ ರೂಪಿಸಲಾಗಿದೆ. ಯೋಜನೆ ಕೈಬಿಡುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ. ಈಗಾಗಲೆ ಯೋಜನೆ ಬೇಡ ಎಂದು ಶಾಸಕರು ಸರ್ಕಾರಕ್ಕೆ, ಮುಖ್ಯಮಂತ್ರಿಗಳಿಗೆ, ಸಚಿವರಿಗೆ ಮನವಿ ನೀಡಿದ್ದಾರೆ. ಸಂಸದರಿಗೆ ಸಹ ಯೋಜನೆ ಕೈಬಿಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಅನ್ಸರ್ ಸಖಾಫಿ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಿ.ಆರ್.ಜಯಂತ್, ದಿನೇಶ್ ಶಿರವಾಳ, ಅಖಿಲೇಶ್ ಚಿಪ್ಳಿ, ಮಲ್ಲಿಕಾರ್ಜುನ ಹಕ್ರೆ, ಪ್ರಸನ್ನ ಕೆರೆಕೈ, ರವಿಕುಮಾರ್ ಸಿಗಂದೂರು, ಪೋಷಿಣಿ ಬೇಸೂರು ಇನ್ನಿತರರು ಮಾತನಾಡಿದರು. ಪ್ರತಿಭಟನೆಯಲ್ಲಿ ಶಿವಾನಂದ ಕುಗ್ವೆ, ವ.ಶಂ.ರಾಮಚಂದ್ರ ಭಟ್, ಹೊನಗೋಡು ರತ್ನಾಕರ್, ರವಿಕುಮಾರ್ ಎಚ್.ಎಂ., ಎಂ.ವಿ.ಪ್ರತಿಭಾ, ಸಫಿಯಾ ಅಬೂಬಕರ್, ಸುವರ್ಣ ಟೀಕಪ್ಪ, ಚೇತನರಾಜ ಕಣ್ಣೂರು, ಡಾ. ಜೀವನ್, ರೋಹಿತ್ ಇನ್ನಿತರರು ಮಾತನಾಡಿದರು. ಜಿ.ಟಿ.ಸತ್ಯನಾರಾಯಣ ಕಾರ್ಯಕ್ರಮ ನಿರ್ವಹಿಸಿದರು.

Tags: Besuru Nuclear Power Plantkannada newskannada news livelatest newsmalnad newsOpposition to Besuru Nuclear Power Plantpeople were shockedshimogashivamoggaಶಿವಮೊಗ್ಗ
Previous Post

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

Next Post

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL