• About Us
  • Advertise
  • Privacy & Policy
  • Contact Us
Friday, September 11, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕೆ.ಎಸ್‌. ಈಶ್ವರಪ್ಪ ಹೇಳಿಕೆಗೆ ಆಕ್ರೋಶ, ಕಾಂಗ್ರೆಸ್ ಮುಖಂಡ ಮಧುಸೂದನ್ ಕೊಟ್ಟ ಸವಾಲೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 15, 2026
in ಶಿವಮೊಗ್ಗ
ಕೆ.ಎಸ್‌. ಈಶ್ವರಪ್ಪ ಹೇಳಿಕೆಗೆ ಆಕ್ರೋಶ, ಕಾಂಗ್ರೆಸ್ ಮುಖಂಡ ಮಧುಸೂದನ್ ಕೊಟ್ಟ ಸವಾಲೇನು?
Share on FacebookShare on TwitterShare on WhatsApp

ಶಿವಮೊಗ್ಗ:  ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲ ಇಡೀ ರಾಜ್ಯವೇ ಕೇಸರಿಮಯವಾಗಿ ಕಾಂಗ್ರೆಸ್ ನಿರ್ನಾಮವಾಗುತ್ತದೆ ಎಂದು ಹೇಳಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಸಿ.ಜಿ. ಮಧುಸೂದನ್ ಖಂಡಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಮಧುಸೂದನ್, ಕೆ.ಎಸ್. ಈಶ್ವರಪ್ಪ ಅವರಿಗೆ ಬಿಜೆಪಿ ಪಕ್ಷವೇ ರಾಜಕೀಯ ನಿವೃತ್ತಿ ನೀಡಿದೆ. ಆದರೆ, ಇನ್ನೂ ಅಧಿಕಾರದ ಆಸೆಯಿಂದ ಅವರು ರಾಷ್ಟಭಕ್ತರ ಬಳಗ ಕಟ್ಟಿಕೊಂಡು ಅಧಿಕಾರದ ಕನಸು ಕಾಣುತ್ತಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ವಿರುದ್ಧ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಾ ಪ್ರಚಾರ ಪಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ > ಇಡೀ ರಾಜ್ಯ ಕೇಸರಿಮಯವಾಗಲಿದೆ!, ಕಾಂಗ್ರೆಸ್ ನಿರ್ನಾಮ ಖಚಿತ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಕೋಮು ವಿವಾದ ಸೃಷ್ಟಿಸುತ್ತಾ ಮತದಾರರನ್ನು ದಿಕ್ಕುತಪ್ಪಿಸಿ ರಾಜಕೀಯ ಲಾಭ ಪಡೆದುಕೊಳ್ಳುತ್ತಲೇ ಬಂದಿದ್ದಾರೆ. ಈ ದೇಶದ ಸಂವಿಧಾನದಲ್ಲಿ ಎಲ್ಲಾ ಧರ್ಮ, ಮತದವರಿಗೂ ಸಮಾನ ಅವಕಾಶಗಳನ್ನು ಕೊಡಲಾಗಿದೆ ಎನ್ನುವುದನ್ನೇ ಅವರು ಮರೆತಿದ್ದಾರೆ. ಅಲ್ಪಸಂಖ್ಯಾತರನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಾ ಬಂದಿರುವ ಈಶ್ವರಪ್ಪನವರ ಶಿಕ್ಷಣ ಸಂಸ್ಥೆಯ ಮರ್ಯಾದೆಯನ್ನು ಉಳಿಸಿದ್ದು, ಅದೇ ಅಲ್ಪಸಂಖ್ಯಾತ ಸಮುದಾಯದ ಓರ್ವ ವಿದ್ಯಾರ್ಥಿನಿ ಎನ್ನುವುದನ್ನು ಮರೆತಿದಿದ್ದಾರೆ ಎಂದು ಟೀಕಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳು ಸರ್ವ ಜನಾಂಗದ ಶಾಂತಿಯ ತೋಟ. ಆದರೆ, ಅಲ್ಲಿ ಹಿಜಾಬ್ ಎಂದು ಹೇಳುತ್ತಾ ಈಶ್ವರಪ್ಪ ಗೊಂದಲ ಸೃಷ್ಟಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಕ್ಷಣ ಸಂಸ್ಥೆಗಳನ್ನು ನಿಜಾರ್ಥದಲ್ಲಿ ಸರ್ವ ಜನಾಂಗದ ತೋಟ ಮಾಡಲು ಮಾಡಿರುವ ಆದೇಶವನ್ನು ಮಾಡಿದ್ದು, ಶಾಲಾ ಕಾಲೇಜುಗಳಲ್ಲಿ ಹಿಜಾಬ್, ಜನಿವಾರ, ರುದ್ರಾಕ್ಷಿ ಸೇರಿದಂತೆ ಅವರವರ ಆಚಾರದ ಸಂಕೇತಗಳನ್ನು ಧರಿಸಲು ಅವಕಾಶ ನೀಡಿದ್ದಾರೆ. ಇದನ್ನು ಒಪ್ಪಿಕೊಳ್ಳಲು ಇವರಿಗೆ ಆಗುತ್ತಿಲ್ಲ. ಹಾಗಾಗಿ ಈಶ್ವರಪ್ಪರ ರೀತಿಯ ವ್ಯಕ್ತಿಗಳು ತಲೆಬುಡವಿಲ್ಲದ ಹೇಳಿಕೆಗಳನ್ನು ನೀಡುತ್ತಾ ಪ್ರಚಾರ ಪಡೆದುಕೊಳ್ಳುತ್ತಿರುವುದು ಸರಿಯಲ್ಲ.

ಇದನ್ನೂ ಓದಿ > ಶಿವಮೊಗ್ಗ ಎಂಆರ್‌ಎಸ್‌ ವೃತ್ತದ ಡಬಲ್‌ ಟ್ಯಾಂಕ್‌ ಇನ್ನು ನೆನಪು, ಹಳೆಯ ವಾಟರ್‌ ಟ್ಯಾಂಕ್‌ ಡೆಮಾಲಿಷ್‌

ಈ ಬಾರಿಯ ಪಿಯುಸಿ ಫಲಿತಾಂಶದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ನಾಲ್ಕನೆಯವಳಾಗಿ ಸಾಧನೆ ಮಾಡಿದ್ದನ್ನು ಸ್ವತಃ ಈಶ್ವರಪ್ಪ ಒಪ್ಪಿಕೊಂಡಿದ್ದರು. ಅವರಿಗೆ ಧೈರ್ಯವಿದ್ದರೆ, ಅವರ ಶಿಕ್ಷಣ ಸಂಸ್ಥೆಯಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶವಿಲ್ಲ ಎಂದು ಬೋರ್ಡ್ ಹಾಕಲಿ‌ ಎಂದು ಸವಾಲು ಹಾಕಿದ್ದಾರೆ.

ತಮ್ಮ ಮಗನ ರಾಜಕೀಯ ಭವಿಷ್ಯ ರೂಪಿಸಲು ಈಶ್ವರಪ್ಪ ಪ್ರಯತ್ನಿಸುತ್ತಿದ್ದು, ಇದರ ಅಂಗವಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈಶ್ವರಪ್ಪನವರು ಇನ್ನಾದರೂ ತಮ್ಮ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳಲಿ. ರಾಜಕೀಯವಾಗಿ ಸ್ವಯಂ ನಿವೃತ್ತಿ ಪಡೆಯಲಿ ಎಂದು ಸಿ.ಜಿ. ಮಧುಸೂದನ್ ಆಗ್ರಹಿಸಿದ್ದಾರೆ.

Tags: a challenge from Congress leader Madhusudan?K.S. Eshwarappa'skannada news livelatest newsmalnad newsOutrage over K.S. Eshwarappa's statementshimogashivamoggaಶಿವಮೊಗ್ಗ
Previous Post

V Five Product ಲೋಕಾರ್ಪಣೆ, ಯಡಗೆರೆ ಕನಸಿನ ಸಂಸ್ಥೆಗೆ ಶುಭ ಹಾರೈಸಿದ ಕೆ.ಎಸ್.ಈಶ್ವರಪ್ಪ

Next Post

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟಿದೆ ರೇಟ್?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಪೆಟ್ರೋಲ್, ಡೀಸೆಲ್ ಬೆಲೆ  ಏರಿಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟಿದೆ ರೇಟ್?

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟಿದೆ ರೇಟ್?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026
ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

September 11, 2026
ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

September 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026

Copyright © 2026 Yuva Dhwani. Designed by KIPL