• About Us
  • Advertise
  • Privacy & Policy
  • Contact Us
Saturday, September 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಮಹಿಳೆಯರಿಗಾಗಿ ಚಿತ್ರಕಲಾ ಸ್ಪರ್ಧೆ, ಸಿಇಒ ಹೇಮಂತ್‌

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 9, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ಮಹಿಳೆಯರಿಗಾಗಿ ಚಿತ್ರಕಲಾ ಸ್ಪರ್ಧೆ, ಸಿಇಒ ಹೇಮಂತ್‌
Share on FacebookShare on TwitterShare on WhatsApp

ಶಿವಮೊಗ್ಗ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯಲ್ಲಿ ಸುಪ್ತವಾಗಿರುವ ಚಿತ್ರಕಲಾ ಪ್ರತಿಭೆಯನ್ನು ಅನಾವರಣಗೊಳಿಸಲು ಹಾಗೂ ಅಂತಹ ಕಲಾಪ್ರತಿಭೆಗಳನ್ನು ಉತ್ತೇಜಿಸುವ ಸಲುವಾಗಿ ಮಾರ್ಚ್‌15ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿಯ ಸಭಾಂಗಣದಲ್ಲಿ ಈ ಕುರಿತು ವಿವರಿಸಿ ಮಾತನಾಡಿದ ಅವರು, ಮಹಿಳಾ ದಿನದ ಮಹತ್ವವನ್ನು ಸಾರುವುದರ ಜೊತೆಗೆ ಸಾರ್ವಜನಿಕರಲ್ಲಿ ಪರಿಸರ ಹಾಗೂ ಪ್ರಕೃತಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶಗಳಲ್ಲೊಂದಾಗಿದೆ ಎಂದರು.

ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮಹಿಳಾ ಸ್ಪರ್ಧಿಗಳು ಪ್ರಕೃತಿ ಎಂಬ ವಿಷಯದ ಮೇಲೆ ಚಿತ್ರವನ್ನು ಚಿತ್ರಿಸಬೇಕು. ಸ್ಪರ್ಧಿಗಳಿಗೆ 2X2.5 ಅಳತೆಯ ಕ್ಯಾನ್‌ವಾಸನ್ನು ಆಯೋಜಕರಿಂದ ನೀಡಲಾಗುವುದು. ಚಿತ್ರಕ್ಕೆ ಅಗತ್ಯವಾಗಿರುವ ಕುಂಚ, ಬಣ್ಣ ಇತ್ಯಾದಿ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು. ಸ್ಪರ್ಧೆಯಲ್ಲಿ ವಿಜೇತರಿಗೆ ಮೊದಲ ಬಹುಮಾನ ರೂ.8,000/-, ದ್ವಿತೀಯ ಬಹುಮಾನ ರೂ.6,000/-, ತೃತೀಯ ಬಹುಮಾನ ರೂ.4,000/- ಹಾಗೂ ಎರಡು ಪ್ರಶಂಸಾ ಬಹುಮಾನಗಳು ಇದ್ದು, ತಲಾ ರೂ.2,000/-ಗಳ ನಗದು ಪುರಸ್ಕಾರದ ಜೊತೆಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು ಎಂದರು.

ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿರುವ ಜಿಲ್ಲೆಯಲ್ಲಿ ವಾಸವಾಗಿರುವ ಮಹಿಳೆಯರು ಈ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಮಹಿಳೆಯರಿಗೆ ಪ್ರವೇಶ ಉಚಿತವಾಗಿದ್ದು, ವಯಸ್ಸಿನ ನಿರ್ಬಂಧವಿರುವುದಿಲ್ಲ. ಆಸಕ್ತರು ತಮ್ಮ ಹೆಸರನ್ನು ಮುಂಚಿತವಾಗಿ ಆನ್‌ಲೈನ್‌ಮೂಲಕ(https://forms.gle/rgYDA7gTqo1KsUoJ8) ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಣಿ ಹಾಗೂ ಸ್ಪರ್ಧೆ ನಡೆಯುವ ಸ್ಥಳದಲ್ಲಿ ಜಿಲ್ಲೆಯಲ್ಲಿ ತಾವು ವಾಸವಾಗಿರುವ ಬಗ್ಗೆ ಆಧಾರ್‌ಸೇರಿದಂತೆ ಯಾವುದೇ ಒಂದು ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು ಎಂದರು.

ನಕಲು ಪ್ರತಿ, ಮೊಬೈಲ್‌ಹಾಗೂ ಇತರೆ ಯಾವುದೇ ಮಾಧ್ಯಮಗಳ ಮೂಲಕ ಚಿತ್ರಗಳನ್ನು ನೋಡಿಕೊಂಡು ಚಿತ್ರ ಬರೆಯಲು ಅವಕಾಶ ಇರುವುದಿಲ್ಲ. ಆಸಕ್ತರು ನೋಂದಣಿ ಮತ್ತು ಮಾಹಿತಿಗಾಗಿ ಸಹಾಯವಾಣಿ : ಮೊ.7760932206, 9483815226ನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ಅವರು ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: CEO Hemantkannada newskannada news livelatest newsmalnad newsPainting competition for women in Shivamoggashivamogga CEO Hemantಮಹಿಳಾ ದಿನಾಚರಣೆಶಿವಮೊಗ್ಗ
Previous Post

ಶಿವಮೊಗ್ಗ ಹೊಳಲೂರು ಬಳಿ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

Next Post

ಶಿವಮೊಗ್ಗ, ರಸ್ತೆ ಅಪಘಾತ, ಪತ್ರಕರ್ತ ಅನಿಲ್ ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ರಸ್ತೆ ಅಪಘಾತ, ಪತ್ರಕರ್ತ ಅನಿಲ್ ಸಾವು

ಶಿವಮೊಗ್ಗ, ರಸ್ತೆ ಅಪಘಾತ, ಪತ್ರಕರ್ತ ಅನಿಲ್ ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026

Copyright © 2026 Yuva Dhwani. Designed by KIPL