ನವದೆಹಲಿ: ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲದ ಮೇಲೆ ಹೊಸ ಸೆಸ್ ವಿಧಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಫೆಬ್ರವರಿ 1ರಿಂದ ಹೊಸ ತೆರಿಗೆ ಮತ್ತು ಸೆಸ್‌ಗಳು ಜಾರಿಗೆ ಬರಲಿದ್ದು, ಸಿಗರೇಟ್, ಬೀಡಿ, ಪಾನ್ ಮಸಾಲಗಳ ಬೆಲೆಯೂ ಏರಿಕೆಯಾಗಲಿದೆ.
ಫೆಬ್ರವರಿ 1ರಿಂದ ಪಾನ್ ಮಸಾಲ, ಸಿಗರೇಟ್, ತಂಬಾಕು ಮತ್ತು ಅಂತಹ ಮಾದಕ ಉತ್ಪನ್ನಗಳ ಮೇಲೆ ಶೇ. ೪೦ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ. ಜೊತೆಗೆ, ಪಾನ್ ಮಸಾಲದ ಮೇಲೆ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗುತ್ತದೆ. ಇನ್ನು, ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕವನ್ನು ಹೇರಲಾಗುತ್ತದೆ ಎಂದು ಅಧಿಸೂಚನೆ ಹೇಳಿದೆ. ಬೀಡಿಗಳ ಮೇಲೆ ಶೇ.18 ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಲಾಗಿದೆ.













