ಹೊಳೆಹೊನ್ನೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಕೆರೆಬೀರನಹಳ್ಳಿ ಹಾಗೂ ಮೂಡಲವಿಠಲಾಪುರದ ನಡುವೆ ನಡೆದಿದೆ.
ಇದನ್ನೂ ಓದಿ > ಶಿವಮೊಗ್ಗ ರೈಲ್ವೆ ಸ್ಟೇಷನ್ ಬಳಿ ಹೊತ್ತಿ ಉರಿದ ಗೂಡ್ಸ್ ಲಾರಿ!
ಮೃತ ವ್ಯಕ್ತಿಯನ್ನು ರಾಜಪ್ಪ ಎಂದು ಗುರುತಿಸಲಾಗಿದೆ.
ರಾಜಪ್ಪ ಅವರು ಮೂಡಲವಿಠಲಾಪುರದ ಕಡೆಯಿಂದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕೈಮರದ ಕಡೆಯಿಂದ ಹೊಳೆಹೊನ್ನೂರು ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ರಾಜಪ್ಪ ಅವರಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ > ಶಿವಮೊಗ್ಗ, ಎರಡು ದಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಡಿಕ್ಕಿಯ ಪರಿಣಾಮವಾಗಿ ತಲೆ, ಕೈಕಾಲಿಗೆ ಗಂಭೀರವಾಗಿ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ರಾಜಪ್ಪ ಅವರು ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ.
ರಾಜಪ್ಪ ಅವರಿಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ರಸ್ತೆ ಬದಿಗೆ ಬಿದ್ದಿದ್ದು, ಕಾರಿನಲ್ಲಿದ್ದವರಿಗೂ ಸಹ ಪೆಟ್ಟು ಬಿದ್ದಿದೆ.
ಕಾರು ಚಾಲಕನ ಅಜಾಗರೂಕತನದ ಚಾಲನೆಯೇ ಘಟನೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














