ಶಿವಮೊಗ್ಗ : ಭದ್ರಾವತಿ ತಾಲ್ಲೂಕಿನ ನಾಗತಿಬೆಳಗಲು ಗ್ರಾಮದ ತಾಂಡಾ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 65,500 ಮೌಲ್ಯದ 1 ಕೆ.ಜಿ 310 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > > ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು!
ನಾಗತಿಬೆಳಗಲು ತಾಂಡಾ ಕಡೆಯಿಂದ ಭದ್ರಾವತಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಗಾಂಜಾವನ್ನು ಮಾರಾಟ ಮಾಡಲು ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆ ಭದ್ರಾವತಿ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ > > ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.














