ಆನಂದಪುರ: ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿದ್ದ 124ನೇ ರಕ್ತದಾನ ಶಿಬಿರವು ಆನಂದಪುರ ಪೊಲೀಸ್ ಠಾಣೆಯಲ್ಲಿ ನಡೆಯಿತು.
73 ಮಂದಿ ರಕ್ತದಾನ
ಆನಂದಪುರ ಪೊಲೀಸ್ ಠಾಣೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ, ಬಿ.ಆರ್. ಅಂಬೇಡ್ಕರ್ ರಕ್ತ ಕೇಂದ್ರದ ಸಹಯೋಗದೊಂದಿಗೆ ನಡೆದ ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಸರ್ಕಾರಿ ನೌಕರರು, ಮಹಿಳೆಯರು ಹಾಗೂ ಸಾರ್ವಜನಿಕರು ಸೇರಿದಂತೆ ಒಟ್ಟು 73 ಮಂದಿ ರಕ್ತದಾನ ಮಾಡಿದರು.
ಇದನ್ನೂ ಓದಿ > > ಶಿವಮೊಗ್ಗ, ವೆಜ್, ನಾನ್‌ವೆಜ್ ಫುಡ್ ಕೋರ್ಟ್‌ಗಳಿಗೆ ಎಸಿ ತಂಡದ ದಿಢೀರ್ ದಾಳಿ
ರಕ್ತದಾನವು ಜೀವ ಉಳಿಸುವ ಮಹತ್ವದ ಸೇವೆ: ಪಿಎಸ್‌ಐ ಪ್ರವೀಣ್
ಈ ಸಂದರ್ಭದಲ್ಲಿ ಮಾತನಾಡಿದ ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್, ರಕ್ತದಾನವು ಜೀವ ಉಳಿಸುವ ಮಹತ್ವದ ಸೇವೆಯಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಮಾನವೀಯ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
ಇದನ್ನೂ ಓದಿ > > ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!
ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಧನ್ಯವಾದ
ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದ ಎಲ್ಲ ರಕ್ತದಾನಿಗಳಿಗೆ ಹಾಗೂ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲು ಸಹಕರಿಸಿದ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು.














