• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಸಮಾಜದತ್ತ ನಮ್ಮ ಹೊಣೆಗಾರಿಕೆಯನ್ನು ಮರೆಯಬಾರದು : ಸಿಂಗಾಪುರದ ಯುನಿವರ್ಸಲ್ ಟೆಕ್ನಾಲಜಿ ಸೊಲ್ಯುಶನ್ ಕಂಪನಿ ಸಮೂಹ ವ್ಯವಸ್ಥಾಪಕ‌ ನಿರ್ದೇಶಕ ಬ್ರಜೇಶ್ ಸಿಂಗ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 25, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’
Share on FacebookShare on TwitterShare on WhatsApp
ಶಿವಮೊಗ್ಗ: ನಮ್ಮೊಳಗಿರುವ ಶಕ್ತಿಯನ್ನು ಸಮಾಜಕ್ಕೆ ಹೇಗೆ ಅರ್ಪಿಸಬೇಕು ಎಂಬ ಹೊಣೆಗಾರಿಕೆ ಎಲ್ಲರಲ್ಲೂ ಮುಖ್ಯ ಎಂದು ಸಿಂಗಾಪುರದ ಯುನಿವರ್ಸಲ್ ಟೆಕ್ನಾಲಜಿ ಸೊಲ್ಯುಶನ್ ಕಂಪನಿ ಸಮೂಹ ವ್ಯವಸ್ಥಾಪಕ‌ ನಿರ್ದೇಶಕ ಬ್ರಜೇಶ್ ಸಿಂಗ್ ಹೇಳಿದರು.
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ > ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ
ಕನೆಕ್ಟಿಂಗ್ ಡಾಟ್ಸ್ ಎಂಬ ಎನ್‌ಜಿಒ ಮೂಲಕ ನೂರಾರು ಕುಟುಂಬಗಳಿಗೆ ನಿರಂತರ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ‌. ಜನರ ಸಮಸ್ಯೆ ಬಗ್ಗೆ ಸ್ಥಳೀಯ ಆಡಳಿತದ ಗಮನಕ್ಕೆ ತಂದಾಗ, ಎಲ್ಲವೂ ದಾಖಲೆಗಳಲ್ಲಿ ಸರಿಯಾಗಿದೆ ಎಂಬ ಉತ್ತರಗಳು ಬಂದವು. ಆದರೆ ವಾಸ್ತವದಲ್ಲಿ ಏನೂ ಸರಿಯಾಗಿರಲಿಲ್ಲ. ನೀತಿಗಳು ಉತ್ತಮವಾಗಿದ್ದರೂ, ಅವುಗಳ ಅನುಷ್ಠಾನದಲ್ಲಿ ಕೊರತೆ ಇಂದಿನ ಸಮಾಜದಲ್ಲಿ ಎದ್ದು ಕಾಣುತ್ತಿದೆ. ಈ ಹಿನ್ನಲೆಯಲ್ಲಿ ಸಮಾಜದತ್ತ ನಮ್ಮ ಬದ್ಧತೆಯನ್ನು ತೋರಿಸಬೇಕಿದೆ ಎಂದು ಹೇಳಿದರು.
ನವದೆಹಲಿಯ ಇನ್ನೊಗ್ರೆಸ್ ಕಂಪನಿ ಸ್ಥಾಪಕ ಸುಮಂತ್ ಪರಿಮಳ್ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಅಧ್ಯಯನಕ್ಕೆ ಸೀಮಿತವಾಗದೆ, ನಮ್ಮದೇ ಕನಸುಗಳನ್ನು ನಿರ್ಮಿಸಿಕೊಳ್ಳಿ. ಇಂದಿನ ಜಾಗತಿಕ ಪರಿಸ್ಥಿತಿಯಲ್ಲಿ ದೊಡ್ಡ ಬದಲಾವಣೆಗಳು ನಡೆಯುತ್ತಿವೆ. ಭಾರತವು ಜಾಗತಿಕ ವೇದಿಕೆಯಲ್ಲಿ ಮಹತ್ವದ ಪಾತ್ರವಹಿಸುತ್ತಿದೆ.
ನಮ್ಮ ಬುದ್ಧಿಶಕ್ತಿಯು ರೋಬೋಟಿಕ್ಸ್ ಮತ್ತು ಎಐ ವ್ಯವಸ್ಥೆಗಳೊಂದಿಗೆ ಒಂದಾಗುತ್ತಿದೆ. ಅವುಗಳು ನಮ್ಮ ಪರವಾಗಿ ಕೆಲಸ ಮಾಡುವ ಮಟ್ಟಕ್ಕೆ ತಂತ್ರಜ್ಞಾನ ಬೆಳೆಯುತ್ತಿದೆ. ಎಐ ಎಂಬುದು ಬುದ್ದಿ ಮತ್ತು ವಿದ್ಯುತ್ ಶಕ್ತಿಯ ಮೇಲೆ ಅವಲಂಬಿತವಾಗಿದೆ. ವಾಸ್ತವದಲ್ಲಿ ಕೇವಲ ಕಂಪ್ಯೂಟ್ ಪವರ್ ಬಗ್ಗೆ ಮಾತ್ರವಲ್ಲ, ನಿಜವಾದ ವಿದ್ಯುತ್ ಶಕ್ತಿಯನ್ನು ಎಲ್ಲಿಂದ ಪಡೆಯುವುದು ಎಂಬುದರ ಬಗ್ಗೆಯು ಚಿಂತಿಸಬೇಕಿದೆ.
ಇದನ್ನೂ ಓದಿ > ಶಿವಮೊಗ್ಗದಲ್ಲಿ ಏ.27ರ ಸೋಮವಾರ ಕೃಷಿ ಮಾರಾಟ ಪರಿಕರ ಅಂಗಡಿಗಳ ಬಂದ್!
ಅದಕ್ಕಾಗಿ ಹಸಿರು ಶಕ್ತಿಯ ಮೂಲಗಳಿಂದ ವಿದ್ಯುತ್ ಪಡೆಯುವಂತೆ ‘ಗ್ರೀನ್ ಡೇಟಾ ಸೆಂಟರ್‌ಗಳು’ ಸ್ಥಾಪಿಸಲು ಯೋಜನೆಗಳು ಸಿದ್ಧವಾಗುತ್ತಿವೆ. ಸೌರಶಕ್ತಿ ಮತ್ತು ಹೈಡ್ರೋಜನ್ ಆಧಾರಿತ ಶಕ್ತಿ ವ್ಯವಸ್ಥೆಗಳಲ್ಲಿ ಭಾರಿ ಹೂಡಿಕೆಗಳು ನಡೆಯುತ್ತಿವೆ. ಭವಿಷ್ಯದ ಸಂಪೂರ್ಣ ತಂತ್ರಜ್ಞಾನವು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಶಕ್ತಿಯ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ವಿಭಾಗ ಮಟ್ಟದಲ್ಲಿ ಹಿರಿಯ ಕಿರಿಯ ವಿದ್ಯಾರ್ಥಿಗಳು ಒಂದೆಡೆ ಸೇರಿಸುವ ಎನ್ಇಎಸ್ ಸಂಸ್ಥೆಯ ಆಶಯ ಯಶಸ್ವಿಯಾಗಿದ್ದು, ಜ್ಞಾನ ಹಂಚಿಕೆಯ ಪ್ರಕ್ರಿಯೆ ಸಫಲಗೊಂಡಿದೆ. ಮನಸ್ಸಿನೊಂದಿಗೆ ಹುಟ್ಟಿದ ಸಂಬಂಧ ನಮ್ಮಲ್ಲಿ ಸದಾ ಕಾಲ ಉಳಿಯುತ್ತದೆ. ಸಂಸ್ಕಾರಯುತ ಶಿಕ್ಷಣಕ್ಕೆ ಎನ್ಇಎಸ್ ಸದಾ ಒತ್ತು ನೀಡುತ್ತಿದೆ ಎಂದು ಹೇಳಿದರು.‌

ಪ್ರೇರಣೆ ನೀಡಿದ ಹಿರಿಯ ವಿದ್ಯಾರ್ಥಿಗಳ ಯಶೋಗಾಥೆ

ಪ್ರತಿಷ್ಠಿತ ಉದ್ಯಮಿಗಳಾಗಿ, ಕಲಾವಿದರಾಗಿ, ಅಭಿಯಂತರರಾಗಿ, ಮೆಸ್ಕಾಂ ಬೆಸ್ಕಾಂ ಸೇರಿದಂತೆ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಉನ್ನತ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ನೂರಾರು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಹಾದಿಯ ದುರ್ಗಮತೆಯನ್ನು ಕಿರಿಯ ವಿದ್ಯಾರ್ಥಿಗಳ ಮುಂದೆ ಹಂಚಿಕೊಂಡರು. ಅನೇಕ ಉದ್ಯೋಗವಕಾಶ ಕೋರಿದ ಅರ್ಜಿಗಳು, ಸಂವಹನ ಮತ್ತು ಸೃಜನಾತ್ಮಕ ಕೌಶಲ್ಯಗಳ ಕೊರತೆಯಿಂದ ತಿರಸ್ಕೃತವಾಗುತ್ತವೆ. ಉದ್ಯೋಗ ನೀಡುವ ಸಂಸ್ಥೆ ಕೇವಲ ಅಂಕಗಳನ್ನು ಮಾತ್ರ ಪರಿಗಣಿಸುವುದಿಲ್ಲ; ಒಟ್ಟಾರೆ ಸಾಮರ್ಥ್ಯವನ್ನು ಗಮನಿಸುತ್ತವೆ. ಸಂವಹನ ಕೌಶಲ್ಯತೆ ಎಂಬುದು ದೊಡ್ಡ ಮಟ್ಟದ ಪ್ರಭಾವ ಬೀರುತ್ತದೆ. ಜೊತೆಯಲ್ಲಿ ಪ್ರಾದೇಶಿಕ ಭಾಷೆಗಳ ಪ್ರೌಢಿಮೆಯು ಅತ್ಯಂತ ಅಗತ್ಯವಾಗಿದೆ ಎಂದು ಸಲಹೆ ನೀಡಿದರು.
ಎನ್ಇಎಸ್ ನಿರ್ದೇಶಕರಾದ ಟಿ.ಆರ್‌.ಅಶ್ವಥನಾರಾಯಣ ಶೆಟ್ಟಿ, ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಎಚ್.ಬಿ.ಸುರೇಶ್, ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಬಸಪ್ಪಾಜಿ ವೇದಿಕೆ ಮೇಲೆ ಉಪಸ್ಥಿತರಿದ್ದರು.
Tags: 'Power Meet' of senior students of Electrical Engineering of JNNCE Collegekannada newskannada news livemalnad newsshimogashivamoggaಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಏ.27ರ ಸೋಮವಾರ ಕೃಷಿ ಮಾರಾಟ ಪರಿಕರ ಅಂಗಡಿಗಳ ಬಂದ್!

Next Post

ಒಳಮೀಸಲಾತಿ, ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ, ಕೆ.ಎಸ್.ಈಶ್ವರಪ್ಪ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ, ಕೆ.ಎಸ್‌. ಈಶ್ವರಪ್ಪ ಹೇಳಿದ್ದೇನು?

ಒಳಮೀಸಲಾತಿ, ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ, ಕೆ.ಎಸ್.ಈಶ್ವರಪ್ಪ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL