ತುಮರಿ: ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಸಮೀಪದ ರಾಷ್ಟ್ರೀಯ ಹೆದ್ದಾರಿ 369 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಚರಂಡಿಗೆ ಇಳಿದ ಘಟನೆ ತುಮರಿ ಸಮೀಪದ ಕಳಸವಳ್ಳಿ ಬಳಿ ನಡೆದಿದೆ.
ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬಸ್ಸಿನಲ್ಲಿದ್ದ 20 ಜನ ಪ್ರಯಾಣಿಕರು ಇದ್ದರು. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com













