ರಿಪ್ಪನ್‌ಪೇಟೆ: ಬರುವೆ ಗ್ರಾಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ತಾಹಿರ್ ಹುಸೇನ್ (16) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > ಭದ್ರಾವತಿ ನಗರದ ವಿವಿಧ ದೇವಾಲಯಗಳಲ್ಲಿ ಶ್ರೀ ರಾಮ ನವಮಿ ಸಂಭ್ರಮ
ತಾಹಿರ್ ಹುಸೇನ್ ಗದ್ದೆಯ ಪಕ್ಕದಲ್ಲಿದ್ದ ಕೆರೆಯ ಏರಿ ಮೇಲೆ ನಡೆದು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.














