ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 2024 ನೇ ಸಾಲಿನ ರ್‍ಯಾಂಕ್ ಪ್ರಕಟಗೊಂಡಿದ್ದು, ನಗರದ ಕಮಲಾ ನೆಹರು ರಾಷ್ಟ್ರೀಯ ಮಹಿಳಾ ಕಾಲೇಜಿನ ಐಚ್ಚಿಕ ಕನ್ನಡ ವಿಭಾಗದ ವಿದ್ಯಾರ್ಥಿನಿ ರಿಯಾ ಆಯಿಶಾ ಬಿಎ ವಿಭಾಗದಲ್ಲಿ 9 ನೇ ರ್‍ಯಾಂಕ್ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಪ್ರಾಂಶುಪಾಲರಾದ ಮಮತಾ.ಪಿ.ಆರ್ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ಎನ್‌ಇಎಸ್ ಆಡಳಿತ ಮಂಡಳಿ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.














