• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಹಿರಿಯ ಪತ್ರಕರ್ತ ಡಿ. ಮಹದೇವಪ್ಪ ಅವರಿಗೆ ‘ಪಿ. ಲಂಕೇಶ್ ಪ್ರಶಸ್ತಿ’ ಪ್ರದಾನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 14, 2026
in ಶಿವಮೊಗ್ಗ
ಹಿರಿಯ ಪತ್ರಕರ್ತ ಡಿ. ಮಹದೇವಪ್ಪ ಅವರಿಗೆ ‘ಪಿ. ಲಂಕೇಶ್ ಪ್ರಶಸ್ತಿ’ ಪ್ರದಾನ
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಸರ್ಕಾರಿ ನೌಕರರ ಭವನದಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಡಿ. ಮಹದೇವಪ್ಪ ಅವರಿಗೆ ಪ್ರತಿಷ್ಠಿತ ಪಿ. ಲಂಕೇಶ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಸಂದರ್ಭದಲ್ಲೇ ಈ ಕಾರ್ಯಕ್ರಮ ಆಯೋಜನೆಗೊಂಡಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ > ಶಿವಮೊಗ್ಗ, ತ್ಯಾವರೆಕೊಪ್ಪ ಸಿಂಹ ಧಾಮದಲ್ಲಿ ನೀರಾನೆ ಹಂಸಿಣಿ ಸಾವು…!

ಮಾಧ್ಯಮ ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವಕ್ಕೆ ಅಪಾಯ

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟ ಸಿಂಗ್, “ಇತ್ತೀಚಿನ ದಿನಗಳಲ್ಲಿ ಮುದ್ರಣ ಮಾಧ್ಯಮದ ಭವಿಷ್ಯದ ಬಗ್ಗೆ ಆತಂಕ ಎದುರಾಗಿದೆ. ಆದರೆ ಸುದ್ದಿಯ ನೈಜತೆಯನ್ನು ತಿಳಿಯಲು ಪತ್ರಿಕೆಗಳಿಂದ ಮಾತ್ರ ಸಾಧ್ಯ. ಯಾವಾಗ ಪತ್ರಿಕಾರಂಗ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತದೆಯೋ, ಆಗ ಪ್ರಜಾಪ್ರಭುತ್ವವೇ ತನ್ನ ಅಸ್ತಿತ್ವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ,” ಎಂದು ಎಚ್ಚರಿಸಿದರು.
ಮುಂದುವರಿದು ಮಾತನಾಡಿದ ಅವರು, “ಮಾಹಿತಿ ಹಕ್ಕು ಕಾಯ್ದೆಯು ತನಿಖಾ ಪತ್ರಿಕೋದ್ಯಮಕ್ಕೆ ‘ಬ್ರಹ್ಮಾಸ್ತ್ರ’ವಿದ್ದಂತೆ. ಪತ್ರಕರ್ತರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ತಂತ್ರಜ್ಞಾನಕ್ಕೆ ತಕ್ಕಂತೆ ಅಪ್‌ಡೇಟ್ ಆಗದಿದ್ದರೆ ನಾವು ಔಟ್‌ಡೇಟ್ ಆಗುವುದು ಅನಿವಾರ್ಯ,ಎಂದರು.

ಪತ್ರಿಕೋದ್ಯಮಕ್ಕೆ ಶ್ರೇಷ್ಠ ಪರಂಪರೆಯಿದೆ:

ಹಿರಿಯ ಚಿಂತಕ ಪ್ರೊ. ರಾಜೇಂದ್ರ ಚೆನ್ನಿ ಮಾತನಾಡಿ, ಪ್ರಜಾಪ್ರಭುತ್ವ ಕೇವಲ ಸಂವಿಧಾನದ ಪುಸ್ತಕದಲ್ಲಿ ಅಥವಾ ಚುನಾವಣೆಯಲ್ಲಿ ಇದ್ದರೆ ಸಾಲದು, ಅದು ಜನರ ಮನಸ್ಥಿತಿಯಲ್ಲಿ ಅಸ್ತಿತ್ವಕ್ಕೆ ಬರಬೇಕು. ಈ ಮನಸ್ಥಿತಿ ರೂಪಿಸಲು ಪತ್ರಿಕೋದ್ಯಮದಿಂದ ಮಾತ್ರ ಸಾಧ್ಯ. ಗಾಂಧೀಜಿಯವರು ದಕ್ಷಿಣ ಆಫ್ರಿಕಾದಲ್ಲಿ ‘ಇಂಡಿಯನ್ ಒಪೀನಿಯನ್’ ಪತ್ರಿಕೆಯ ಮೂಲಕ ಅಹಿಂಸಾತ್ಮಕ ಹೋರಾಟಕ್ಕೆ ಪತ್ರಿಕೋದ್ಯಮವನ್ನು ಬಳಸಿಕೊಂಡರು. ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವುದೇ ಪತ್ರಿಕೋದ್ಯಮದ ಮೂಲ ಸಂಸ್ಕೃತಿ,ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತರು ಸಂಶೋಧಕರಾಗಿ ಕಾರ್ಯನಿರ್ವಹಿಸಲಿ: ಡಿ. ಮಹದೇವಪ್ಪ

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹಿರಿಯ ಪತ್ರಕರ್ತ ಡಿ. ಮಹದೇವಪ್ಪ, ಸಂವಿಧಾನ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸುತ್ತಿದ್ದೇವೆ. ವರದಿಗಾರರು ತಮ್ಮ ಅನುಭವ ಮತ್ತು ಆಧಾರಗಳ ಮೇಲೆ ವರದಿ ಸಿದ್ಧಪಡಿಸಬೇಕು. ಪತ್ರಕರ್ತರು ಯಾವಾಗಲೂ ಸಂಶೋಧಕರಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ, ಎಂದು ತಮ್ಮ ಅನುಭವ ಹಂಚಿಕೊಂಡರು. ಪಿ. ಲಂಕೇಶ್‌ ಅವರ ಟೀಕೆ ಟಿಪ್ಪಣಿ ಬರಹಗಳು ರಾಜಕಾರಣಿಗಳ ಶೈಲಿ ಮತ್ತು ಸಮಾಜದ ನೈಜತೆಯನ್ನು ಪ್ರತಿಬಿಂಬಿಸುತ್ತಿದ್ದವು ಎಂದು ಅವರು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಮಾತನಾಡಿ, ಇಂದಿನ ಕಾಲದಲ್ಲಿ ಲಾಬಿ ಮಾಡಿ ಪ್ರಶಸ್ತಿ ಪಡೆಯುವವರ ನಡುವೆ, ಪ್ರೆಸ್ ಟ್ರಸ್ಟ್ ಅರ್ಹತೆ ಮತ್ತು ಹಿರಿತನದ ಆಧಾರದ ಮೇಲೆ ಸಾಧಕರನ್ನು ಆಯ್ಕೆ ಮಾಡುತ್ತಿದೆ. ಅಂಬೇಡ್ಕರ್ ಅವರು ಧ್ವನಿ ಇಲ್ಲದವರಿಗೆ ಧ್ವನಿಯಾಗಲು ಪತ್ರಿಕೆಗಳನ್ನು ಆರಂಭಿಸಿದ್ದರು. ಅವರ ಜನ್ಮದಿನದಂದೇ ಸಜ್ಜನ ಪತ್ರಕರ್ತ ಡಿ. ಮಹದೇವಪ್ಪ ಅವರಿಗೆ ಪ್ರಶಸ್ತಿ ನೀಡುತ್ತಿರುವುದು ನಮಗೆ ಹೆಮ್ಮೆಯ ವಿಷಯ ಎಂದರು.

ಇದನ್ನೂ ಓದಿ > ಅಣ್ಣಾನಗರ ಚಾನಲ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ

ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವೇದಿಕೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಯು.ಎಚ್. ವೈದ್ಯನಾಥ್, ಪ್ರೆಸ್‌ಟ್ರಸ್ಟ್ ಕಾರ್ಯದರ್ಶಿ ನಾಗರಾಜ್ ನೇರಿಗೆ, ಟ್ರಸ್ಟ್‌ನ ಪದಾಧಿಕಾರಿಗಳು, ಪ್ರಮುಖರಾದ ಡಿವೈಎಸ್‌ಪಿ ಗಂಗಾಧರ್, ಡಿಎಸ್‌ಎಸ್ ಪ್ರಮುಖರಾದ ಹಾಲೇಶಪ್ಪ, ಗುರುಮೂರ್ತಿ, ಕಲ್ಲೂರು ಮೇಘರಾಜ್, ಅನಂತ್‌ರಾಮ್ ಸಿಂಗ್, ವಾರ್ತಾಧಿಕಾರಿ ಮಾರುತಿ, ಗೋಪಿನಾಥ್, ಕಾಂಗ್ರೆಸ್ ಮುಖಂಡ ರವಿಕುಮಾರ್ ಮತ್ತಿತರರಿದ್ದರು.

Tags: 'P. Lankesh Award'kannada newskannada news livelatest newsmalnad newsSenior journalist D. MahadevappaSenior journalist D. Mahadevappa presented with 'P. Lankesh Award'shivamoggaಶಿವಮೊಗ್ಗ
Previous Post

ಶಿವಮೊಗ್ಗ, ತ್ಯಾವರೆಕೊಪ್ಪ ಸಿಂಹ ಧಾಮದಲ್ಲಿ ನೀರಾನೆ ಹಂಸಿಣಿ ಸಾವು…!

Next Post

ಭದ್ರಾವತಿಯ ಈ ಪ್ರದೇಶಗಳಲ್ಲಿ ನಾಳೆ  ಇಡೀ ದಿನ ಕರೆಂಟ್‌ ಇರಲ್ಲ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ಭದ್ರಾವತಿಯ ಈ ಪ್ರದೇಶಗಳಲ್ಲಿ ನಾಳೆ  ಇಡೀ ದಿನ ಕರೆಂಟ್‌ ಇರಲ್ಲ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL