ಶಿವಮೊಗ್ಗ: ಕಳೆದ ಸುಮಾರು 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ತರೀಕೆರೆಯ ಮಲ್ಲೇಶ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > > ಚಾಕು ತೋರಿಸಿ ದರೋಡೆ, ಇಬ್ಬರನ್ನು ಬಂಧಿಸಿದ ಪೊಲೀಸರು!
ಕುರಿಕಳ್ಳತನ ಪ್ರಕರಣ
ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.48/2014, ಕಲಂ 390 ಐಪಿಸಿ ಅಡಿಯಲ್ಲಿ ಕುರಿಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಆರೋಪಿ ಮಲ್ಲೇಶ್ ಅವರು ನ್ಯಾಯಾಲಯದ ಮುಂದೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಶಿಕಾರಿಪುರದ ಘನ ಎರಡನೇ ಹೆಚ್ಚುವರಿ ಮತ್ತು ಜೆಎಂಎಫ್ಸಿ ನ್ಯಾಯಾಲಯವು ಪ್ರಕರಣದ ಸಿ.ಸಿ. ನಂ.605/2023 ರಲ್ಲಿ ಆರೋಪಿಯ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.
ಪೊಲೀಸ್ ತಂಡದಿಂದ ಕಾರ್ಯಾಚರಣೆ
ನ್ಯಾಯಾಲಯದ ದಸ್ತಗಿರಿ ವಾರೆಂಟ್ ಜಾರಿಗೊಳಿಸುವ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಮತ್ತು ಸಿಬ್ಬಂದಿಗಳ ತಂಡವು ಕಾರ್ಯಾಚರಣೆ ನಡೆಸಿ, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ.
ಇದನ್ನೂ ಓದಿ > > ಪಾಗಲ್ ಪ್ರೇಮಿಯ ಕಿರುಕುಳ, ಶಿವಮೊಗ್ಗದ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ!
ಬಂಧಿತ ಆರೋಪಿಯನ್ನು ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
12 ವರ್ಷಗಳ ಕಾಲ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.














