• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ವಿಶೇಷ

ಶಿವಮೊಗ್ಗ, ತಿಪ್ಪೆಗುಂಡಿಯಾದ ಸೋಮಿನಕೊಪ್ಪ ಲಾಸ್ಟ್‌ ಬಸ್‌ಸ್ಟಾಪ್, ಗಮನ ಹರಿಸುವರೇ ಅಧಿಕಾರಿಗಳು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 29, 2026
in ವಿಶೇಷ, ಶಿವಮೊಗ್ಗ
ಶಿವಮೊಗ್ಗ, ತಿಪ್ಪೆಗುಂಡಿಯಾದ ಸೋಮಿನಕೊಪ್ಪ ಲಾಸ್ಟ್‌ ಬಸ್‌ಸ್ಟಾಪ್, ಗಮನ ಹರಿಸುವರೇ ಅಧಿಕಾರಿಗಳು?
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ವಾರ್ಡ್ ನಂ. 01ರ ಸೋಮಿನಕೊಪ್ಪದ ಕೊನೆಯ ಬಸ್ ನಿಲ್ದಾಣ ಸೂಕ್ತ ನಿರ್ವಹಣೆ ಇಲ್ಲದೆ ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದ್ದು, ಪ್ರತಿನಿತ್ಯ ಬಸ್‌ಗಾಗಿ ಕಾಯುವ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಬಸ್ ನಿಲ್ದಾಣದ ಸುತ್ತಮುತ್ತ ಗಿಡ-ಗಂಟೆಗಳು ಬೆಳೆದು ನಿಂತಿದ್ದು, ಸ್ವಚ್ಛತೆ ಇಲ್ಲದೆ ಕಸದ ರಾಶಿ ಹಾಗೂ ತಿಪ್ಪೆಗುಂಡಿಯಂತಾಗಿದೆ. ನಿಲ್ದಾಣದ ಆವರಣದಲ್ಲಿ ಸ್ವಚ್ಛತೆ ಮರೀಚಿಕೆಯಾಗಿರುವ ಪರಿಣಾಮ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗದಿಂದ ಆಂಧ್ರಪ್ರದೇಶಕ್ಕೆ 2 ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ, ಇಲ್ಲಿದೆ ಡೀಟೇಲ್ಸ್

ಗಿಡಗಂಟೆಗಳ ನಡುವೆ ನಾಯಿಗಳ ವಾಸ್ತವ್ಯ

ಬಸ್ ನಿಲ್ದಾಣದ ಸುತ್ತಲೂ ಬೆಳೆದು ನಿಂತಿರುವ ಗಿಡಗಂಟೆಗಳ ನಡುವೆ ನಾಯಿಗಳು ವಾಸ್ತವ್ಯ ಹೂಡಿದ್ದು, ನಿಲ್ದಾಣಕ್ಕೆ ಆಗಮಿಸುವ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಗಿಡಗಂಟೆಗಳನ್ನು ತೆರವುಗೊಳಿಸಿ, ಆವರಣವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕೆಂಬ ಆಗ್ರಹ ಕೇಳಿಬಂದಿದೆ.

ಆಸನವಿದ್ದೂ ಕೂರಲು ಆಗಲ್ಲ

ಈ ಪಾಳು ಬಿದ್ದ ಬಸ್ ಶೆಲ್ಟರ್’ನಲ್ಲಿ ಕೂರಲು ಆಸನ ಅಥವಾ ಕಟ್ಟೆಯಿದ್ದರೂ ಪ್ರಯಾಣಿಕರಿಗೆ ಕೂರಲು ಆಗದ ಸ್ಥಿತಿ ಎದುರಾಗಿದೆ. ಕಾರಣ, ಒಳಕ್ಕೆ ತೆರಳಲು ದಾರಿಯೇ ಸರಿಯಾಗಿಲ್ಲ. ನಿಲ್ದಾಣದ ಮುಂಭಾಗದಲ್ಲಿ ಸಂಫೂರ್ಣವಾಗಿ ಗಿಡಗಂಟೆಗಳು ಬೆಳೆದಿವೆ. ಅಲ್ಲದೇ, ಮುಂಭಾಗ ಪೂರ್ಣವಾಗಿ ಗಲೀಜಿನಿಂದ ತುಂಬಿಕೊಂಡಿದ್ದು, ಶೆಲ್ಟರ್ ಒಳಗೆ ಹೋಗಲು ಆಗದ ಸ್ಥಿತಿಯಿದೆ. ಒಳಕ್ಕೆ ಹೋದರೂ ಕೂರುವಂತಹ ಸ್ಥಿತಿ ಅಲ್ಲಿಲ್ಲ ಎನ್ನುವುದು ಶೋಚನೀಯ ಸಂಗತಿ.
ಈ ಪರಿಣಾಮವಾಗಿ, ಬಸ್ ಬರುವವರೆಗೂ ಪ್ರಯಾಣಿಕರು ನಿಂತುಕೊಂಡೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಯೋವೃದ್ಧರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳಿಗೆ ಇದು ಹೆಚ್ಚಿನ ತೊಂದರೆ ಉಂಟುಮಾಡುತ್ತಿದೆ.

ಅಧಿಕಾರಿಗಳ ಗಮನಕ್ಕೆ ಬಂದಿಲ್ಲವೇ?

ಬಸ್ ನಿಲ್ದಾಣದ ಸುತ್ತಮುತ್ತ ಸ್ವಚ್ಛತೆ ಇಲ್ಲದಿರುವುದು ಹಾಗೂ ಗಿಡಗಂಟೆಗಳು ಬೆಳೆದು ನಿಂತಿರುವುದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಬಂದಿಲ್ಲವೇ ಎಂಬ ಪ್ರಶ್ನೆಯನ್ನು ಸ್ಥಳೀಯರು ಕೇಳುತ್ತಿದ್ದಾರೆ.

ವಾರ್ಡ್‌ನ ಸ್ವಚ್ಛತೆ ಹಾಗೂ ಸಾರ್ವಜನಿಕ ಮೂಲಸೌಕರ್ಯಗಳ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಬೇಕು. ಗಿಡಗಂಟೆಗಳನ್ನು ತೆರವುಗೊಳಿಸುವುದರ ಜೊತೆಗೆ ಕಸದ ರಾಶಿಯನ್ನು ತೆರವು ಮಾಡಿ, ಬಸ್ ನಿಲ್ದಾಣದ ಸುತ್ತಮುತ್ತ ನಿಯಮಿತವಾಗಿ ಸ್ವಚ್ಛತೆ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬಸ್ ನಿಲ್ದಾಣವನ್ನು ಸುಸ್ಥಿತಿಗೆ ತರಲು ಆಗ್ರಹ

ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸೋಮಿನಕೊಪ್ಪದ ಕೊನೆಯ ಬಸ್ ನಿಲ್ದಾಣವನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಿ, ಪ್ರಯಾಣಿಕರು ಕುಳಿತುಕೊಳ್ಳಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ, ನಿಲ್ದಾಣದ ಸುತ್ತಲಿನ ಗಿಡಗಂಟೆ ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿ, ಸ್ವಚ್ಛ ಮತ್ತು ಸುರಕ್ಷಿತ ವಾತಾವರಣ ನಿರ್ಮಿಸಬೇಕು ಎಂದು ಸ್ಥಳೀಯರು ಹಾಗೂ ಬಸ್ ಪ್ರಯಾಣಿಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಸಾರ್ವಜನಿಕರ ನಿತ್ಯದ ಓಡಾಟಕ್ಕೆ ಪ್ರಮುಖವಾಗಿರುವ ಬಸ್ ನಿಲ್ದಾಣವೊಂದು ಈ ರೀತಿ ನಿರ್ಲಕ್ಷ್ಯಕ್ಕೆ ಒಳಗಾಗಿರುವುದು ಎಷ್ಟು ಸರಿ? ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಸೋಮಿನಕೊಪ್ಪ ಬಸ್ ನಿಲ್ದಾಣಕ್ಕೆ ಕಾಯಕಲ್ಪ ನೀಡಬೇಕಿದೆ.

ಇದನ್ನೂ ಓದಿ > > ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಎಲ್ಲೇಲ್ಲಿ?

Tags: kannada newskannada news livelatest newsmalnad newsshimogashivamoggaSominakoppaTippegundi's Sominakoppa Lost Bus StopWill the Authorities Pay Attention?ಶಿವಮೊಗ್ಗ
Previous Post

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಎಲ್ಲೇಲ್ಲಿ?

Next Post

ಸಾಗರ, ಕೆರೆಯೊಳಗೆ ಬೀಳಬೇಕಿದ್ದ ಬಸ್, ಅದೃಷ್ಟವಶಾತ್ ಪ್ರಯಾಣಿಕರು ಪಾರು..!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ, ಕೆರೆಯೊಳಗೆ ಬೀಳಬೇಕಿದ್ದ ಬಸ್, ಅದೃಷ್ಟವಶಾತ್ ಪ್ರಯಾಣಿಕರು ಪಾರು..!

ಸಾಗರ, ಕೆರೆಯೊಳಗೆ ಬೀಳಬೇಕಿದ್ದ ಬಸ್, ಅದೃಷ್ಟವಶಾತ್ ಪ್ರಯಾಣಿಕರು ಪಾರು..!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL