ಶಿವಮೊಗ್ಗ : ಭದ್ರಾವತಿ ಅರಣ್ಯ ಪ್ರದೇಶದಲ್ಲಿ ಜಿಂಕೆಗಳನ್ನು ಬೇಟೆಯಾಡುತ್ತಿದ್ದ ಗ್ಯಾಂಗ್ ವೊಂದರ ಮೇಲೆ ಅರಣ್ಯ ಸಂಚಾರಿ ದಳ ಹಾಗೂ ವಲಯ ಅರಣ್ಯಾಧಿಕಾರಿಗಳ ತಂಡ ಜಂಟಿ ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಚನ್ನಗಿರಿ ತಾಲೂಕಿನ ಮಲ್ಲಿಗೆರೆ ನಿವಾಸಿ ದಿವಾಕರ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > > ಶಿವಮೊಗ್ಗದಲ್ಲಿ ಬಿಜೆಪಿ ಬರ ಅಧ್ಯಯನ, ಅಧಿಕಾರಿಗಳೊಂದಿಗೆ ನಾಯಕರ ಮಹತ್ವದ ಸಭೆ
ಮಾವಿನಕಟ್ಟೆ ಶಾಖೆಯ ಲಕ್ಷ್ಮೀಸಾಗರ ಕಿರು ಅರಣ್ಯ ಪ್ರದೇಶದಲ್ಲಿ ಬೇಟೆಗಾರರು ಜಿಂಕೆಗಳನ್ನು ಕೊಲ್ಲುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಸಿಬ್ಬಂದಿ ದಾಳಿ ನಡೆಸಿ 2 ಜಿಂಕೆಗಳ ಕಳೇಬರ, 1 ಕಾರು, 3 ಬೈಕ್ಗಳನ್ನ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ > > ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು!
ಭದ್ರಾವತಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಚನ್ನಗಿರಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.
ಇದನ್ನೂ ಓದಿ > > ಶಿವಮೊಗ್ಗ, ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?














