ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್’ಟಿಎಸ್’ಸಿ-1) ತೀರ್ಪು ನೀಡಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್ ಗ್ರೂಪ್ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
23 ವರ್ಷದ ಯುವಕ ಜೈಲು ಶಿಕ್ಷೆಗೆ ಗುರಿಯಾದವನು. ಜೈಲು ಶಿಕ್ಷೆಯ ಜೊತೆಗೆ 1,01,000 ರೂ. ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ತೀರ್ಪು ನೀಡಿದೆ.
ಇದನ್ನೂ ಓದಿ > > ಕಾಡಾನೆಗಳ ಸಂಚಾರ, ಗೌತಮಪುರ, ಚನ್ನಾಪುರ ಸೇರಿ ಹಲವು ಗ್ರಾಮಗಳಿಗೆ ಎಚ್ಚರಿಕೆ!
ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ವಾದ ಮಂಡಿಸಿದ್ದರು.
ಇದನ್ನೂ ಓದಿ > > ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?
13 ವರ್ಷದ ಬಾಲಕಿ ಮೇಲೆ ಅಪರಾಧಿ ಯುವಕನು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತಂತೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು. ಅಂದಿನ ಇನ್ಸ್’ಪೆಕ್ಟರ್ ಚಂದ್ರಕಲಾ ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.














