ಸಾಗರ: ದಸರಾ ಹಬ್ಬಕ್ಕೆ ಹೊಸ ಕಾರು ಖರೀದಿಸುವ ಸಂಭ್ರಮದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಹಾಗೂ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಸಾಗರ ನಗರದ ಮಾರುತಿ ಕಾರು ಶೋರೂಮ್ ಬಳಿ ಈ ಘಟನೆ ನಡೆದಿದೆ. ಶೋರೂಮ್ನಿಂದ ಏಕಾಏಕಿ ಹೊರಬಂದ ಹೊಸ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಡುರಸ್ತೆಯಲ್ಲಿ ನಡೆದ ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.















