ಶಿವಮೊಗ್ಗ: ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದ್ದ ದರೋಡೆ ಪ್ರಕರಣವೊಂದಕ್ಕೆ ಸಂಬಂಸಿದಂತೆ, ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶಿವಮೊಗ್ಗ ಟೌನ್ ನಿವಾಸಿ ಜಾಫರ್ ಬೇಗ್ ಎಂದು ಗುರುತಿಸಲಾಗಿದೆ. ಈತ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಉಷಾ ನರ್ಸಿಂಗ್ ಹೋಮ್ ಬಳಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದನು.
ಇದನ್ನೂ ಓದಿ > ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ದೊಡ್ಡ ಶಾಕ್!,ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ
ಈ ಸಂಬಂಧ ಈ ಹಿಂದೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯಾಗಿದ್ದ ಜಾಫರ್ ಬೇಗ್ ಕಳೆದ 8 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಇದನ್ನೂ ಓದಿ > ಜೂ.07ರಂದು ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಕರೆಂಟ್ ಇರಲ್ಲ
ಆರೋಪಿಯ ಗೈರುಹಾಜರಿಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು ಆತನ ವಿರುದ್ಧ ವಾರಂಟ್ ಅನ್ನು ಹೊರಡಿಸಿತ್ತು. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಜಯನಗರ ಪೊಲೀಸ್ ಠಾಣೆಯ ಪಿಐ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಆರೋಪಿತನನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ > ‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ, ಶಿವಮೊಗ್ಗದಲ್ಲಿ ಸಂದರ್ಶನ















