• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಏ.23- 24ರಂದು ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 20, 2026
in ಶಿವಮೊಗ್ಗ
ಶಿವಮೊಗ್ಗ, ಏ.23- 24ರಂದು ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ
Share on FacebookShare on TwitterShare on WhatsApp

ಶಿವಮೊಗ್ಗ: ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸಿಇಟಿ ಪರೀಕ್ಷೆ ಸಿದ್ದತೆ ಕುರಿತು ಚರ್ಚಿಸಲು ಪರೀಕ್ಷಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳ ವಿವರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಬಾರಿ ಜಿಲ್ಲೆಯಾದ್ಯಂತ ಒಟ್ಟು 29 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಶಿವಮೊಗ್ಗ ನಗರದಲ್ಲಿ 21, ಭದ್ರಾವತಿಯಲ್ಲಿ 05 ಹಾಗೂ ಸಾಗರದಲ್ಲಿ 03 ಕೇಂದ್ರಗಳಿವೆ. ಒಟ್ಟು 9,864 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಶಿವಮೊಗ್ಗದಿಂದ 7,456, ಭದ್ರಾವತಿಯಿಂದ 1,120 ಮತ್ತು ಸಾಗರ ತಾಲೂಕಿನಿಂದ 1,288 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

 ಇದನ್ನೂ ಓದಿ >  ಕಾರಾಗೃಹ ಇಲಾಖೆಯಲ್ಲಿ ಉದ್ಯೋಗಾವಕಾಶ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ನಿಷೇಧಿತ ಆಜ್ಞೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ರಡಿ ನಿಷೇಧಿತ ಆಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಈ ಭಾಗದಲ್ಲಿ ಜೆರಾಕ್ಸ್ ಅಂಗಡಿಗಳು, ಸೈಬರ್ ಅಂಗಡಿಗಳನ್ನು ಪರೀಕ್ಷಾ ವೇಳೆಯಲ್ಲಿ ಬಂದ್ ಮಾಡಲು ಸೂಚಿಸಲಾಗಿದೆ. ಪ್ರಶ್ನೆ ಪತ್ರಿಕೆಗಳ ಸಾಗಾಣಿಕೆ ಮತ್ತು ಪರೀಕ್ಷಾ ಕೇಂದ್ರಗಳ ಸುರಕ್ಷತೆಗಾಗಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಕೋರಲಾಗಿದೆ. ಪ್ರತಿ ವಾಹನಕ್ಕೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಸೂಚಿಸಲಾಗಿದೆ.
ವೆಬ್ ಕ್ಯಾಸ್ಟಿಂಗ್: ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಜಿಲ್ಲಾ ಪಂಚಾಯತ್ ಮೂಲಕ ಎಲ್ಲಾ ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ನಿರ್ವಹಣೆ: ಪ್ರಶ್ನೆ ಪತ್ರಿಕೆಗಳ ವಿತರಣೆಗಾಗಿ ಒಟ್ಟು 10 ಮಾರ್ಗಗಳನ್ನು (ಶಿವಮೊಗ್ಗ-06, ಭದ್ರಾವತಿ-02, ಸಾಗರ-02) ಗುರುತಿಸಲಾಗಿದ್ದು, ಸಾಗಾಣಿಕೆ ಉಸ್ತುವಾರಿಗೆ ಮೂವರು ಸದಸ್ಯರ ಸಮಿತಿಯನ್ನು ನೇಮಿಸಲಾಗಿದೆ. ಅಲ್ಲದೆ, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಗಾಗಿ ಮುಖ್ಯ ಅಧೀಕ್ಷಕರು, ವೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಈ ಬಾರಿ ಪ್ರತಿ ಕೇಂದ್ರಕ್ಕೂ ‘ಡ್ರೆಸ್ ಕೋಡ್ ಆಫೀಸರ್’ ಅವರನ್ನು ಹೊಸದಾಗಿ ನೇಮಕ ಮಾಡಲಾಗಿದೆ.
ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದAತೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಲು ಮೆಸ್ಕಾಂ ಇಲಾಖೆಗೆ ಪತ್ರ ಬರೆಯಲಾಗಿದೆ. ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಸ್ಕ್ಯಾನ್ ಮಾಡಿ ಪರಿಶೀಲಿಸುವ ಆಧುನಿಕ ವ್ಯವಸ್ಥೆಯನ್ನು ಇಲಾಖೆ ಮಾಡಿಕೊಂಡಿದೆ ಎಂದು ಸಭೆಯಲ್ಲಿ ಅವರು ತಿಳಿಸಿದರು.

 ಇದನ್ನೂ ಓದಿ >   ಏ.21: ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಪರೀಕ್ಷಾ ಕೇಂದ್ರಗಳಿಗೆ ಯಾವುದೇ ರೀತಿಯ ಎಲೆಕ್ರ್ಟಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ ಅವರು, ಸೂಕ್ತ ಆಸನ ವ್ಯವಸ್ಥೆ, ಕುಡಿಯಲು ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು. ಮುಖ್ಯವಾಗಿ ವಿಕಲಚೇತನ ಅಭ್ಯರ್ಥಿಗಳಿಗೆ ನೆಲ ಅಂತಸ್ತಿನಲ್ಲಿ ಕುಳಿತು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮತ್ತು ಅವರಿಗೆ ನಿಗದಿಪಡಿಸಲಾದ ಸೌಲಭ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕಾರಿಯಪ್ಪ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.

Tags: CET examCET exam to be held at 29 exam centers in the district on April 23-24kannada newslatest newsshivamoggaಶಿವಮೊಗ್ಗ
Previous Post

ಸಾಗರ, ಜೀವನದಲ್ಲಿ ಜಿಗುಪ್ಸೆ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Next Post

ಕಾಡು ಪ್ರಾಣಿಗಳ ಬೇಟೆಗೆ ಸಂಚು, 45 ನಾಡಬಾಂಬ್‌ಗಳ ಸಹಿತ ಓರ್ವನ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕಾಡು ಪ್ರಾಣಿಗಳ ಬೇಟೆಗೆ ಸಂಚು, 45 ನಾಡಬಾಂಬ್‌ಗಳ ಸಹಿತ ಓರ್ವನ ಬಂಧನ

ಕಾಡು ಪ್ರಾಣಿಗಳ ಬೇಟೆಗೆ ಸಂಚು, 45 ನಾಡಬಾಂಬ್‌ಗಳ ಸಹಿತ ಓರ್ವನ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL