ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ ವಾಹನದ ಮಾಲೀಕರಿಗೆ ನ್ಯಾಯಾಲಯವು ₹26,500 ದಂಡ ವಿಧಿಸಿದೆ.
ಇದನ್ನೂ ಓದಿ > > ಮಲೆನಾಡಿನ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ,ಯಶವಂತಪುರ–ಶಿವಮೊಗ್ಗ ಎಕ್ಸ್ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ!
ಅಕ್ಟೋಬರ್ 9ರಂದು ಸಂಜೆ 5:57ರ ಸುಮಾರಿಗೆ ಶಿವಮೊಗ್ಗ ನಗರದ ಆಲ್ಕೊಳ ಸರ್ಕಲ್ ಬಳಿ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಸ್ವಪ್ನಾ ಎಲ್. ಹಾಗೂ ಸಿಬ್ಬಂದಿಗಳಾದ ಸೂರ್ಯನಾಯ್ಕ ಮತ್ತು ಮೊಹಮ್ಮದ್ ಫಾರೂಕ್ ಅವರು ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದರು. ಈ ವೇಳೆ ವಿನೋಬನಗರ ಪೊಲೀಸ್ ಚೌಕಿ ರಸ್ತೆಯ ಕಡೆಯಿಂದ ಆಲ್ಕೊಳ ಸರ್ಕಲ್ ಕಡೆಗೆ ಟಿವಿಎಸ್ ಜುಪಿಟರ್ ಸ್ಕೂಟರ್ ಚಲಾಯಿಸಿಕೊಂಡು ಬರುತ್ತಿದ್ದ ಅಪ್ರಾಪ್ತ ಬಾಲಕನನ್ನು ತಡೆದು ಪರಿಶೀಲಿಸಿದರು.
ಇದನ್ನೂ ಓದಿ > > ಶಿವಮೊಗ್ಗ ದಸರಾ, ಗಜಪಡೆಗೆ ಭರ್ಜರಿ ಸ್ವಾಗತ, ಆನೆಗಳಿಗೆ ತಾಲೀಮು ಹೇಗಿತ್ತು.?
ವಿಚಾರಣೆ ವೇಳೆ ಸ್ಕೂಟರ್ನ ನೋಂದಾಯಿತ ಮಾಲೀಕರು ಅಪ್ರಾಪ್ತನಿಗೆ ವಾಹನ ಚಲಾಯಿಸಲು ನೀಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಮೋಟಾರು ವಾಹನ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ 4ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ನ್ಯಾಯಾಲಯವು ವಾಹನದ ಮಾಲೀಕರಿಗೆ ₹26,500 ದಂಡ ವಿಧಿಸಿದೆ.
ಇದನ್ನೂ ಓದಿ > > ಶಿವಮೊಗ್ಗ, ರಾಜ್ಯ ಸಂಚಾಲಕರಾಗಿ ಕವಿತಾ ತೋರತ್ ನೇಮಕ
ಪೊಲೀಸರ ಎಚ್ಚರಿಕೆ
ಅಪ್ರಾಪ್ತರಿಗೆ ಯಾವುದೇ ಮೋಟಾರು ವಾಹನ ಚಲಾಯಿಸಲು ನೀಡಬಾರದು. ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಮಕ್ಕಳ ಹಾಗೂ ಸಾರ್ವಜನಿಕರ ಜೀವ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಿವಮೊಗ್ಗ ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.















