• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನ, ಶಿವಮೊಗ್ಗದ ಮಣ್ಣು ಅದ್ಭುತ ಪ್ರತಿಭೆಗಳನ್ನು ಸೃಷ್ಟಿಮಾಡಿದೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 14, 2026
in ಶಿವಮೊಗ್ಗ
ಶಿವಮೊಗ್ಗ ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನ, ಶಿವಮೊಗ್ಗದ ಮಣ್ಣು ಅದ್ಭುತ ಪ್ರತಿಭೆಗಳನ್ನು ಸೃಷ್ಟಿಮಾಡಿದೆ
Share on FacebookShare on TwitterShare on WhatsApp
ಶಿವಮೊಗ್ಗ: ಗೌರವ ಪ್ರೀತಿಯಿಂದ ಬದುಕುತ್ತಿದ್ದ ಸರ್ವಜನಾಂಗದ ಶಾಂತಿಯ ತೋಟವನ್ನು ಮತ್ತೆ ಸೃಜಿಸಲು ಹಾಗೂ ಮಾನವೀಯತೆಯನ್ನು ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ ಎಂದು ಖ್ಯಾತ ವಿಮರ್ಶಕಿ ಡಾ.ಎಂ.ಎಸ್.ಆಶಾದೇವಿ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಕಸಾಪದಲ್ಲಿ ನಡೆದಿರುವ ಅತ್ಯಂತ ದೊಡ್ಡ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ, ಶಿವಮೊಗ್ಗದ ಜಿಲ್ಲಾಧ್ಯಕ್ಷರಾದ ಡಿ.ಮಂಜುನಾಥ, ಬೆಂಗಳೂರಿನ ಜಿಲ್ಲಾಧ್ಯಕ್ಷರ ಪ್ರಕಾಶಮೂರ್ತಿ ಮತ್ತು ಹಿರಿಯ ಸಾಹಿತಿಗಳು ಯಶಸ್ವಿಯಾಗಿರುವುದು ಬಹಳ ದೊಡ್ಡ ಸಾಧನೆ.
ಸಮಸ್ತ ಕನ್ನಡಿಗರನ್ನು ಪ್ರತಿನಿಧಿಸುತ್ತಿರುವ ಸಂಸ್ಥೆ ಕಸಾಪ. ಅದು ಸರ್ವಾಧಿಕಾರಿದ ತೆಕ್ಕೆಗೆ ಸಿಲುಕಿ ನಲುಗಬಾರದು.
ಶಿವಮೊಗ್ಗದ ಮಣ್ಣು ಅದ್ಭುತ ಪ್ರತಿಭೆಗಳನ್ನು ಸೃಷ್ಟಿಮಾಡಿದೆ. ಲಂಕೇಶ್, ಶಾಂತವೇರಿ ಗೋಪಾಲಗೌಡರಂತಹ ವ್ಯಕ್ತಿತ್ವಗಳು ಕನ್ನಡದ ಸಾಕ್ಷಿ ಪ್ರಜ್ಞೆಗಳಾಗಿ ನಿಂತಿದ್ದಾರೆ. ಸತ್ಯವನ್ನು ಹೇಳಲು ಇರುವ ಹಕ್ಕನ್ನು ಪ್ರತಿನಿಧಿಸಿದವರು. ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಿ ಕಾಪಾಡಿದ್ದು ಕನ್ನಡದ ವಿವೇಕವಾಗಿದೆ. ಸತ್ಯದ ಪರವಾಗಿ ನಿಲ್ಲುವ ಗುಣವನ್ನು ಬೆಳೆಸಿಕೊಳ್ಳಬೇಕು. ಅದು ನಮ್ಮ ವ್ಯಕ್ತಿತ್ವವನ್ನು ಎತ್ತರಕ್ಕೆ ಕೊಂಡೊಯ್ಯಲಿದೆ. ಸಾಹಿತ್ಯದ ಬೆಳಕಿನಲ್ಲಿ ಮಾನವೀಯತೆ ಪುನಃ ಅರಳಲಿ, ಸಮಾಜದಲ್ಲಿ ಪ್ರೀತಿ, ಸಹೋದರತ್ವ ಮತ್ತು ಶಾಂತಿ ಮತ್ತೆ ನೆಲೆಸಲಿ ಎಂಬುದು ನಮ್ಮೆಲ್ಲರ ಆಶಯವಾಗಬೇಕು.
ಪ್ರಾಸ್ತಾವಿಕವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ.ಮಂಜುನಾಥ ಮಾತನಾಡಿ, ಕೇಂದ್ರ ಕಸಾಪದಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಸಮ್ಮೇಳನವನ್ನು ಮಾರ್ಚ್ ತಿಂಗಳಲ್ಲಿ ತಡವಾಗಿ ಸಂಘಟಿಸುವ ಅನಿವಾರ್ಯತೆ ಮೂಡಿತು. ಎಸ್.ಎಸ್.ಎಲ್.ಸಿ. ಪರೀಕ್ಷೆಯ ಹಿನ್ನಲೆಯಲ್ಲಿ ಅನೇಕ ಶಿಕ್ಷಕರಿಗೆ ಸಮ್ಮೇಳನದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. 4 ಸಮ್ಮೇಳನವನ್ನು ನಮ್ಮ ಅವಧಿಯಲ್ಲಿ ಸಂಘಟಿಸಲಾಗಿದ್ದು, ಈ ಬಾರಿ ಮಹಿಳೆಯೊಬ್ಬರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಹೊಸನಗರವನ್ನು ಪ್ರತ್ಯೇಕ ಕ್ಷೇತ್ರವಾಗಿ, ಸಾಗರವನ್ನು ಜಿಲ್ಲೆಯನ್ನಾಗಿ ರೂಪಿಸುವ ಕುರಿತ ಮಲೆನಾಡಿನ ಒಡಲಾಳದ ಚಿಂತೆ ಕುರಿತು ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ, ಹಿಂದಿನ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ಜೆ.ಕೆ.ರಮೇಶ್ ಮಾತನಾಡಿದರು. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಕೆ.ಈ.ಕಾಂತೇಶ್, ಕಾಂಗ್ರೆಸ್ ಮುಖಂಡ ರಮೇಶ್ ಶಂಕರಘಟ್ಟ, ಶಿಕಾರಿಪುರ ನಾಗರಾಜಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಉಮೇಶ್, ತಾಲ್ಲೂಕು ಕಸಾಪ ಅಧ್ಯಕ್ಷರಾದ ನಾಗರಕೊಡಿಗೆ ಗಣೇಶ್ ಮೂರ್ತಿ, ಟಿ.ಕೆ.ರಮೇಶ್ ಶೆಟ್ಟಿ, ಎಚ್.ಎಸ್.ರಘು, ಎಚ್.ತಿಮ್ಮಪ್ಪ, ವಿ.ಟಿ.ಸ್ವಾಮಿ, ಷಣ್ಮುಖಾಚಾರ್, ಕೆ.ಎಸ್.ಹುಚ್ಚರಾಯಪ್ಪ, ನರಸಿಂಹಸ್ವಾಮಿ, ಸುಧಾಮಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪ್ರತ್ಯೇಕತೆಯ ಕೂಗು ಕನ್ನಡಕ್ಕೆ ಒಳ್ಳೆಯ ಲಕ್ಷಣವಲ್ಲ : ಸಮ್ಮೇಳನಾಧ್ಯಕ್ಷೆ ವಿಜಯಶ್ರೀ

ಪ್ರತ್ಯೇಕತೆಯ ಕೂಗು ಕನ್ನಡಕ್ಕೆ ಒಳ್ಳೆಯ ಲಕ್ಷಣವಲ್ಲ. ಹೀಗೆ ಮುಂದುವರಿದರೆ ಕನ್ನಡ ಮತ್ತಷ್ಟು ಕಳೆದುಹೋಗುವ ಅಪಾಯವಿದೆ. ಕನ್ನಡಿಗರಲ್ಲಿ ನಿಜವಾದ ಕಳಕಳಿ ಮೂಡಿ,ಭಾವೈಕ್ಯವಾಗಬೇಕು. ಅದಕ್ಕೆ ಸಾಹಿತ್ಯ ಸಮ್ಮೇಳನಗಳು ಪೂರಕ ವೇದಿಕೆಯಾಗಿದೆ ಎಂದು ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ವಿಜಯಶ್ರೀ ಅಭಿಪ್ರಾಯಪಟ್ಟರು.
ಕನ್ನಡ ಭಾಷೆ ಕಲಿತವರು ನಿರಾಯಾಸವಾಗಿ ಕರ್ನಾಟಕದಲ್ಲಿ ಬದುಕಬೇಕು. ನ್ಯಾಯಾಲಯ, ಸರ್ಕಾರಿ ಮತ್ತು ಖಾಸಗಿ ಸಂಸ್ಥೆ ಕಛೇರಿ, ವೈದ್ಯಕೀಯ, ಇಂಜಿನಿಯರಿಂಗ್ ಮುಂತಾದ ಕಡೆಗಳಲ್ಲಿ ಕನ್ನಡ ಬಳಸುತ್ತಾ ಹೋಗಬೇಕು. ಭಾಷೆ ಉಪಯೋಗಿಸುತ್ತಾ ಹೋದರೆ ತಾನಾಗಿಯೇ ಬೆಳೆಯುತ್ತದೆ.ಕೃಷಿ, ಆರೋಗ್ಯ, ಶಿಕ್ಷಣ, ಸಾಂಸ್ಕೃತಿಕ ಮಟ್ಟದಲ್ಲಿ, ಸಾಮಾಜಿಕ ಜೀವನದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಈಗಂತೂ ಆಸ್ಪತ್ರೆಗಳು, ವಿದ್ಯಾಕೇಂದ್ರಗಳು ಹೆಚ್ಚಾಗಿವೆ. ಆದರೆ ಸ್ತ್ರೀ ಜಗತ್ತು ವಿಶಾಲವಾಗಿ ವಿಸ್ತರಿಸಬೇಕಿದೆ.
ಶಿವಮೊಗ್ಗ ಅಗಾಧವಾಗಿ ಬೆಳೆಯುತ್ತಿದೆ. ಇಲ್ಲಿನ ಐತಿಹಾಸಿಕ, ಸಾಂಸ್ಕೃತಿಕ ಕ್ಷೇತ್ರಗಳ ರಕ್ಷಣೆಯೊಂದಿಗೆ ಪ್ರವಾಸಿಗರನ್ನು ಆಕರ್ಷಿಸುವಂತಹ ಯೋಜನೆಗಳನ್ನು ರೂಪಿಸಲು ಸರ್ಕಾರ ಮತ್ತು ಸಾರ್ವಜನಿಕರು ಇತ್ತ ಗಮನಕೊಡಬೇಕು. ಸಂಶೋಧನೆಯಷ್ಟೆ ಅಭಿವೃದ್ಧಿ ಕೂಡ ಮುಖ್ಯ. ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ; ಅದು ಸಂಸ್ಕೃತಿ, ಪರಂಪರೆ, ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಶಕ್ತಿ ಎಂದರು.
ವಿದ್ಯುನ್ಮಾನ ಮಾಧ್ಯಮಗಳ ಪ್ರಭಾವದಿಂದ ಕನ್ನಡ ಭಾಷೆಗೆ ಕೆಲವು ಸವಾಲುಗಳು ಎದುರಾಗಿದ್ದರೂ, ಅವನ್ನು ಸಮರ್ಪಕವಾಗಿ ಬಳಸಿದರೆ ಕನ್ನಡ ಭಾಷೆಯ ಅಭಿವೃದ್ಧಿಗೆ ಸಹಾಯವಾಗಬಹುದು. ಆದ್ದರಿಂದ ನಾವು ಕನ್ನಡವನ್ನು ಶುದ್ಧವಾಗಿ ಬಳಸುವ ಅಭ್ಯಾಸ ಬೆಳೆಸಿ, ಡಿಜಿಟಲ್ ವೇದಿಕೆಗಳಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸುವುದು ಅವಶ್ಯಕ.

ತೆರೆದ ಜೀಪ್ ನಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ

ಗೋಪಾಳದ ಆನೆ ವೃತ್ತದಿಂದ ಬೆಳಗ್ಗೆ 10:30 ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಪ್ರಾರಂಭವಾಯಿತು. ಕನ್ನಡದ ಧ್ವಜದೊಂದಿಗೆ ಅಲಂಕೃತಗೊಂಡಿದ್ದ ವಿಶೇಷ ತೆರೆದ ಜೀಪ್ ನಲ್ಲಿ ಸಮ್ಮೇಳನಾಧ್ಯಕ್ಷರಾದ ವಿಜಯಶ್ರೀ ಅವರನ್ನು ಮೆರವಣಿಗೆ ಮೂಲಕ ಸಾಹಿತ್ಯ ಗ್ರಾಮಕ್ಕೆ ಕರೆತರಲಾಯಿತು. ಸೂಡಾ ಅಧ್ಯಕ್ಷರಾದ ಎಚ್.ಎಸ್.ಸುಂದರೇಶ್ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಜನಪದ ಕಲಾ ತಂಡಗಳು, ಕನ್ನಡದ ಮನಸ್ಸುಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಇದಕ್ಕೂ ಮುನ್ನ ಸಾಹಿತ್ಯ ಗ್ರಾಮದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಮ್ಮೇಳನಾಧ್ಯಕ್ಷೆ ವಿಜಯಶ್ರೀ ರಾಷ್ಟ್ರಧ್ವಜ, ಸಾಹಿತಿ ಎಂ.ನವೀನ್ ಕುಮಾರ್ ನಾಡಧ್ವಜ, ಕಸಾಪ ಅಧ್ಯಕ್ಷ ಡಿ.ಮಂಜುನಾಥ ಪರಿಷತ್ತಿನ ಧ್ವಜವನ್ನು ಆರೋಹಣಗೊಳಿಸಿದರು. ಜಿಲ್ಲಾ ಭಾರತ ಸೇವಾದಲ ಜಿಲ್ಲಾ ಸಂಘಟಕ ಪ್ರಸನ್ನಕುಮಾರ್ ನಿರ್ವಹಿಸಿದರು.

ಮನಸೂರೆಗೊಂಡ ಶಿವಮೊಗ್ಗ ನಾಗರಾಜ್ ಛಾಯಾಚಿತ್ರ ಪ್ರದರ್ಶನ

ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿ ವಿಜೇತ ಮತ್ತು ವನ್ಯಜೀವಿ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರು ಸೆರೆ ಹಿಡಿದ ಅಪರೂಪದ ಛಾಯಾಚಿತ್ರಗಳು, ಸಾಹಿತ್ಯ ಸಮ್ಮೇಳನದಲ್ಲಿ ಜನಮನಸೂರೆಗೊಂಡವು.
ವನ್ಯಜೀವಿ ಮತ್ತು ಜನ ಜೀವನ ಛಾಯಾಚಿತ್ರಗಳನ್ನು ಮಲೆನಾಡು ಪ್ರದೇಶಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ, ಕಸಾಪ ಜಿಲ್ಲಾಧ್ಯಕ್ಷರಾದ ಡಿ. ಮಂಜುನಾಥ್, ಸಮ್ಮೇಳನ ಅಧ್ಯಕ್ಷರಾದ ಸಾಹಿತಿ ವಿಜಯಶ್ರೀ, ಟಿ. ಕೆ. ರಮೇಶ್ ಶೆಟ್ಟಿ, ಕೆ. ಎಸ್. ಹುಚ್ಚರಾಯಪ್ಪ ,ರಮೇಶ್ ಶಂಕರಘಟ್ಟ, ಉಮೇಶ್ ಹಾಲಾಡಿ ಸೇರಿದಂತೆ  ಮತ್ತಿತರರು ವೀಕ್ಷಿಸಿದರು.
Tags: Conference President Vijayashreekannada newskannada news livelatest newsmalnad newsRenowned critic Dr. M.S. AshadevishivamoggaShivamogga District 20th Kannada Sahitya SammelanaThe soil of Shivamogga has created amazing talents
Previous Post

ರಿಪ್ಪನ್‌ಪೇಟೆ, ಸಾವಿರಾರು ಭಕ್ತರ ಸಮ್ಮುಖದಲ್ಲಿ ಪದ್ಮಾವತಿ ದೇವಿಯ ಮಹಾ ರಥೋತ್ಸವ ಸಂಪನ್ನ

Next Post

ಶಿವಮೊಗ್ಗ ಸಾಹಿತ್ಯ ಸಮ್ಮೇಳನ ಗೋಷ್ಟಿ, ಮಲೆನಾಡಿನ ಒಡಲ ಬೆಂಕಿಯಿಂದ ಜೀವ ಜಲ ಖಾಲಿ!, ಪ್ರಕೃತಿ ಉಳಿಸಲು ನಾವೇನು ಮಾಡಬೇಕು?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL