• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಪೊಲೀಸ್‌ನಿಂದ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಜಾರಿಗೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 1, 2026
in ಶಿವಮೊಗ್ಗ
ಶಿವಮೊಗ್ಗ ಜಿಲ್ಲಾ ಪೊಲೀಸ್‌ನಿಂದ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ ಜಾರಿಗೆ
Share on FacebookShare on TwitterShare on WhatsApp
ಶಿವಮೊಗ್ಗ : ಮನೆ ಕಳ್ಳತನ ಪ್ರಕರಣಗಳು ಹೆಚ್ಚಳವಾಗಬಾರದು ಎನ್ನುವ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್-ಎಲ್‍ಹೆಚ್‍ಬಿಎಸ್’ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀಗಹಾಕಿದ ಮನೆಗಳ ಸುರಕ್ಷಣತೆಯ ಸಂಬಂಧ ಪೊಲೀಸ್ ವತಿಯಿಂದ  ನೂತನ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದ್ದು, ಮನೆಯವರೆಲ್ಲಾ ಪ್ರಯಾಣಕ್ಕೆ ಹೊರಟಿದ್ದಾಗ ಮೂರು ಪ್ರಮುಖ ಅಂಶಗಳನ್ನು ಪೊಲೀಸ್ ಗಮನಕ್ಕೆ ತರಬೇಕು. ಹೊರಗೆ ಹೋಗುವ ಮತ್ತು ಮರಳಿ ಬರುವ ದಿನಾಂಕ, ಮನೆಯ ವಿಳಾಸ ಮತ್ತು ಲೋಕೇಷನ್ ಮತ್ತು ತಮ್ಮದೇ ಮನೆಯ ಮುಂದೆ ನಿಂತು ಸೆಲ್ಫಿ ತೆಗೆದು ವಾಟ್ಸ್ ಅಪ್ ಮೂಲಕ ಎಲ್‍ಹೆಚ್‍ಬಿಎಸ್‍ನ ಕಂಟ್ರೋಲ್ ರೂಂ/ಸಹಾಯ ವಾಣಿ ಸಂಖ್ಯೆ-8277982901ಕ್ಕೆ ಅಪ್‍ಲೋಡ್ ಮಾಡಿದರೆ ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್‍ಮಾಡಿ ಮಾಹಿತಿ ನೀಡಿದರೆ ನಿಮ್ಮ ಮನೆಯ ಸುರಕ್ಷತೆಯ ಜವಾಬ್ದಾರಿಯನ್ನು ಪೊಲೀಸರು ತೆಗೆದುಕೊಳ್ಳಲಿದ್ದಾರೆ ಎಂದರು.
ಸಾರ್ವಜನಿಕರು ತಾವು ಪ್ರವಾಸಕ್ಕೆ ಹೊರಟಾಗ ತಮ್ಮ ಗೇಟಿಗೆ ಲಾಕ್ ಮಾಡುವುದು ಮತ್ತು ಮನೆಯ ಮುಂದೆ ಪೇಪರ್‍ಗಳ ರಾಶಿ, ಹಾಲಿನ ಪ್ಯಾಕೇಟ್ ಬಿದ್ದಿರುವುದು ಮತ್ತು ತಾವು ಹೋದ ಪ್ರವಾಸ ತಾಣಗಳ ಸ್ಟೇಟಸ್ ಅನ್ನು ಹಾಕುವುದು ಸೇರಿದಂತೆ ಕೆಲವು ಸೂಕ್ಷ್ಮ ವಿಚಾರಗಳ ಬಗ್ಗೆ ಜಾಗ್ರತರಾದರೆ ಅನೇಕ ಪ್ರಕರಣಗಳು ಕಮ್ಮಿಯಾಗುತ್ತದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕು. ಮತ್ತು ಪೊಲೀಸರ ಎಲ್‍ಹೆಚ್‍ಬಿಎಸ್‍ಗೆ ಸಹಕಾರ ನೀಡಬೇಕು ಎಂದರು.
ಇದನ್ನೂ ಓದಿ >  ಈ ಎರಡು ದಿನ ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್
ಜಿಲ್ಲೆಯಲ್ಲಿ ಮಾದಕದ್ರವ್ಯ ಗಾಂಜಾ ವಿರುದ್ಧ 1-1-2026ರಿಂದ ಮಾದಕ ದ್ರವ್ಯ ಸೇವೆನೆ 266 ಪ್ರಕರಣ ದಾಖಲಿಸಲಾಗಿದೆ.  290 ಆರೋಪಿತರನ್ನು ಬಂಧಿಸಲಾಗಿದೆ. 18 ಪ್ರಕರಣಗಳಲ್ಲಿ 40 ಆರೋಪಿತರನ್ನು ಬಂಧಿಸಿ, ಅವರಿಂದ ಮಾದಕದ್ರವ್ಯ ಅಮಾನತುಪಡಿಸಲಾಗಿದೆ. ಒಟ್ಟು 280 ಪ್ರಕರಣಗಳಲ್ಲಿ 330 ಜನ ಆರೋಪಿತರನ್ನು ಬಂಧಿಸಿ, 30 ಕೆ.ಜಿ. ಗಾಂಜಾ ಅಮಾನತುಪಡಿಸಿ 125 ಗ್ರಾಂ ಎಂಡಿಎಂ ಸೇರಿದಂತೆ 27,37,000 ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.
ಮಾದಕ ವಸ್ತು ವಿತರಿಸುವ ಮೂರು ಮಾರ್ಗಗಳನ್ನು ಮೂಲದಲ್ಲೇ ಬಂದ್ ಮಾಡಲಾಗಿದೆ. ಇನ್ನೂ ಮೂರು ವಿತರಕರ ಸುಳಿವು ದೊರೆತ್ತಿದ್ದು, ಅವರನ್ನು ಬಂಧಿಸಲಿದ್ದೇವೆ ಎಂದರು.
ಗಾಂಜಾ ಪ್ರಕರಣಗಳಲ್ಲಿ 52ಜನ ಬಂಧಿತ ಆರೋಪಿಗಳಿಗೆ ಪುನರ್ವಸತಿ ಕಲ್ಪಿಸಲಾಗಿದ್ದು, ಅವರು ಈಗ ದುಶ್ಚಟದಿಂದ ಮುಕ್ತರಾಗಿದ್ದಾರೆ ಎಂದರು.

ಅಕ್ಕಪಡೆ

ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯವೆಸಗುವ ಮತ್ತು ಅಸಭ್ಯವಾಗಿ ವರ್ತಿಸುವವರ ವಿರುದ್ಧ ಸೂಕ್ತ ಕಾನೂನು ರೀತ್ಯ ಕ್ರಮ ಜರುಗಿಸುವ ಉದ್ದೇಶದಿಂದ ನಗರದಲ್ಲಿ ಅಕ್ಕಪಡೆಯು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಉಪಟಳ ನೀಡಿದ ಒಟ್ಟು 156ಜನ ಅಸಾಮಿಗಳ ವಿರುದ್ಧ ಲಘು ಪ್ರಕರಣವನ್ನು ದಾಖಲಿಸಲಾಗಿದೆ ಎಂದರು.
ಡ್ರೋಣ್ ಕಾರ್ಯಾಚರಣೆ ಮೂಲಕ ಖಾಲಿ ಜಾಗಗಳು ಮತ್ತು ಹೊರ ವಲಯದ ನಿರ್ಜನ ಪ್ರದೇಶಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವವರ ವಿರುದ್ಧ ಜಿಲ್ಲಾ ಪೊಲೀಸ್ ಡ್ರೋಣ್ ಕ್ಯಾಮೇರಾ ಮುಖಾಂತರ ಕಣ್ಗಾವಲು ಇಟ್ಟಿದ್ದು, ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಹೊರವಲಯದಲ್ಲಿ ಜೂಜಾಡುತ್ತಿದ್ದ 19ಜನ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಗಂಗೂರು ಗ್ರಾಮದ ಹೊರವಲಯದಲ್ಲಿ ಡ್ರೋಣ್ ಹಾರಿಸಿದಾಗ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ವರ ವಿರುದ್ಧ ಅಬಕಾರಿ ಕಾಯ್ದೆ ರೀತ್ಯ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ > ಹೊಸನಗರ, ಕಾರು-ಬೈಕ್ ಮುಖಾಮುಖಿ ಡಿಕ್ಕಿ
ವಿಶೇಷವಾಗಿ ಘನ ನ್ಯಾಯಾಲಯದಲ್ಲಿ ಜನವರಿ 1, 2026ರಿಂದ ಇದೂವರೆಗೆ ಒಟ್ಟು 27 ಘೋರ ಗುನ್ನೆ ಪ್ರಕರಣಗಳಲ್ಲಿ ಕೊಲೆ-2, ಕೊಲೆಯತ್ನ-6, ಸುಲಿಗೆ-1, ಎಸ್‍ಸಿ/ಎಸ್ಟಿ-5+376 ಐಪಿಸಿ-1, 376 ಐಪಿಸಿ ಪೋಕ್ಸ್-4, 498(ಎ)-304, (ಬಿ)-02, ಐಟಿಪಿ-1, 279, 427, ಐಪಿಸಿ-139, 135 ಎಲೆಕ್ಟ್ರೀಸಿಟಿ ಕಾಯ್ದೆ-01, ಪ್ರಕರಣಗಳಲ್ಲಿ ಆರೋಪಿತರಿಗೆ ಶಿಕ್ಷೆಯಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳಾದ ಕಾರ್ಯಪ್ಪ, ಉಪಾಧೀಕ್ಷಕರಾದ ಅಂಜನಪ್ಪ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Tags: 'Locked House Beat System'how does it work?shivamoga policeShivamogga District Police has implemented the 'Locked House Beat System'
Previous Post

ಈ ಎರಡು ದಿನ ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

Next Post

ಶಿವಮೊಗ್ಗ, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ 

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ 

ಶಿವಮೊಗ್ಗ, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ 

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL