ಶಿವಮೊಗ್ಗ: ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕ ಮತ್ತು ಇದಕ್ಕೆ ಸಹಕಾರ ನೀಡಿದ್ದ ಆತನ ಮೂವರು ಸಂಬಂಧಿಗಳಿಗೆ ಶಿವಮೊಗ್ಗದ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ (FTSC-1) ತೀರ್ಪು ನೀಡಿದೆ.
ಇದನ್ನೂ ಓದಿ > ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು
ಜೈಲು ಶಿಕ್ಷೆಯ ಜೊತೆಗೆ 1.85 ಲಕ್ಷ ರೂ. ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಅವರು 20/6/2026 ರಂದು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಹೆಚ್ ಆರ್ ಅವರು ವಾದ ಮಂಡಿಸಿದ್ದರು.
ಇದನ್ನೂ ಓದಿ > ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ
ಏನಿದು ಪ್ರಕರಣ?
ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024 ರಲ್ಲಿ ಪ್ರಕರಣ ವರದಿಯಾಗಿತ್ತು. 17 ವರ್ಷದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಹಾಗೂ ಬಾಲ್ಯ ವಿವಾಹ ಕಾಯ್ದೆಗಳಡಿ ಪ್ರಕರಣ ದಾಖಲಾಗಿತ್ತು.
ಅಂದಿನ ಕುಂಸಿ ಠಾಣೆ ಇನ್ಸ್’ಪೆಕ್ಟರ್ ಹರೀಶ್ ಕೆ ಪಾಟೀಲ್ ಅವರು ಪ್ರಕರಣದ ತನಿಖೆ ನಡೆಸಿದ್ದರು. ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.
ಇದನ್ನೂ ಓದಿ > ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!













