ಶಿವಮೊಗ್ಗ: ನಗರದ ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಹಾಗೂ ಯುವ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಸಹ್ಯಾದ್ರಿ ನಾರಾಯಣ ಹೃದಯಾಲಯದ ವೈದ್ಯ ಡಾ. ಸುಪ್ರೀತ್ ಮತ್ತು ಡಾ. ಸಹನಾ ಹಾಗೂ ಅವರ ತಂಡದವರು ತಪಾಸಣಾ ಶಿಬಿರವನ್ನು ನಡೆಸಿಕೊಟ್ಟರು.
ಬಿಪಿ, ಶುಗರ್ ಹಾಗೂ ಇಸಿಜಿ ಪರೀಕ್ಷೆಗಳನ್ನು ಮಾಡಲಾಯಿತು. ಮಾರ್ಕೆಟಿಂಗ್ ವಿಭಾಗದ ವ್ಯವಸ್ಥಾಪಕ ಗಣೇಶ್ ಅವರು ನೇತೃತ್ವವನ್ನು ವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ. ಸುದರ್ಶನ್ ಜಿ ಎಂ, ರಾಸೇಯೋ ಕಾರ್ಯಕ್ರಮಾಧಿಕಾರಿ ಭವ್ಯ ವಿ, ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಪ್ರದೀಪ್ ಶೆಟ್ಟಿ ಕೆ ಅವರು ಉಪಸ್ಥಿತರಿದ್ದರು. ಕಾಲೇಜಿನ ಅಧ್ಯಾಪಕ ವೃಂದದವರು, ಅಧ್ಯಾಪಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಒಟ್ಟು ಹಲವರು ಶಿಬಿರದಲ್ಲಿ ಭಾಗವಹಿಸಿದ್ದರು.













