ಶಿವಮೊಗ್ಗ: ನಗರದ ಹೊರವಲಯದ ಬಿದರೆ ಸಮೀಪ ಸೋಮವಾರ ರಾತ್ರಿ ಕೆಎಸ್ಆರ್ಟಿಸಿ ಬಸ್ ಹಾಗೂ ಟೆಂಪೊ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಎಂಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇದನ್ನೂ ಓದಿ > > ಮನೆ ಮೇಲೆ ಪಲ್ಟಿಯಾದ ಪ್ರವಾಸಿ ಬಸ್, ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು!
ಭದ್ರಾವತಿಯಿಂದ ಶಿವಮೊಗ್ಗದತ್ತ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ, ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಟ್ರ್ಯಾಕ್ಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಟ್ರ್ಯಾಕ್ಸ್ನಲ್ಲಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು. ನಾಲ್ಕೈದು ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ > > ಏಕಾಏಕಿ ಕುಸಿದು ಬಿದ್ದು ಸಕ್ರೆಬೈಲು ಆನೆ ಬಿಡಾರದ ’ಶೌರ್ಯ’ ಆನೆ ಸಾವು!
ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















