ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಅಂತೂ ಬೆಂಗಳೂರಿನ ವಾಯು ಗುಣಮಟ್ಟ ಸುಧಾರಿಸಿತು ಎಂದುಕೊಂಡರೆ, ಇಂದು ಮತ್ತೊಮ್ಮೆ ಯಥಾಸ್ಥಿತಿ ತಲುಪಿದೆ. ಬೆಂಗಳೂರಿನೊಂದಿಗೆ ಶಿವಮೊಗ್ಗದಲ್ಲಿಯೂ ಎಕ್ಯೂಐ ಹದಗೆಟ್ಟಿದ್ದು, ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ಸಲಹೆ ನೀಡಿದ್ದಾರೆ. ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಈ ಬಗ್ಗೆ ಸಾರ್ವಜನಿಕರಲ್ಲಿ ಎಚ್ಚರಿಕೆ ಹಾಗೂ ಜಾಗೃತಿ ಮೂಡಿಸಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com













