ಶಿವಮೊಗ್ಗ,: ಈದ್ ಮಿಲಾದ್ ಪ್ರಯುಕ್ತ ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ತುಂಗಾ ಚಾನಲ್ನ ರಭಸ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಸಮೀಪ ಮಂಗಳವಾರ ನಡೆದಿದೆ.
ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವಿದ್ಯಾರ್ಥಿಯನ್ನು ಬೊಮ್ಮನಕಟ್ಟೆ ನಿವಾಸಿ ಕೃಷ್ಣ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಇದನ್ನೂ ಓದಿ > > ಶಿವಮೊಗ್ಗ | ರೈಲ್ವೆ ಹಳಿ ಮೇಲಿಂದ 3 ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ತಾಯಿ!
ಆರು ವಿದ್ಯಾರ್ಥಿಗಳು ಈಜಲು ತೆರಳಿದ್ದ ಸಂದರ್ಭ ಘಟನೆ
ಗೋಪಾಲದ ಖಾಸಗಿ ಶಾಲೆಯ ಆರು ವಿದ್ಯಾರ್ಥಿಗಳು ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಅಬ್ಬಲಗೆರೆ ಸಮೀಪದ ಈಶ್ವರ ವನದ ಮುಂಭಾಗದಲ್ಲಿರುವ ತುಂಗಾ ಚಾನಲ್ಗೆ ಈಜಲು ತೆರಳಿದ್ದರು ಎನ್ನಲಾಗಿದೆ.
ಈ ವೇಳೆ ಚಾನಲ್ನಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಆರು ಮಂದಿ ವಿದ್ಯಾರ್ಥಿಗಳು ನೀರಿಗಿಳಿದ ಸಂದರ್ಭದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಒಬ್ಬ ವಿದ್ಯಾರ್ಥಿಯ ರಕ್ಷಣೆ
ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಪೈಕಿ ಒಬ್ಬ ವಿದ್ಯಾರ್ಥಿಯನ್ನು ಸ್ಥಳೀಯರು ಸಮಯಕ್ಕೆ ಸರಿಯಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಮತ್ತೊಬ್ಬ ವಿದ್ಯಾರ್ಥಿ ಕೃಷ್ಣ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾನೆ.
ಕೃಷ್ಣ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಾಗಿ ಚಾನಲ್ನಲ್ಲಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.
ಇದನ್ನೂ ಓದಿ > > ಶಿವಮೊಗ್ಗ, ಆ.29ರಿಂದ 31ರವರೆಗೆ ರಾಯರ ಆರಾಧನಾ ಮಹೋತ್ಸವ, ಭಕ್ತರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂಭ್ರಮ!
ಸ್ಥಳದಲ್ಲಿ ಆತಂಕ
ಘಟನೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಚಾನಲ್ನಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ಶೋಧ ಕಾರ್ಯಕ್ಕೆ ಸವಾಲು ಎದುರಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ > > ಸಾಗರ, ಕುತ್ತಿಗೆ ಭಾಗಕ್ಕೆ ಮಾರಕವಾಗಿ ಕೊಚ್ಚಿ ವ್ಯಕ್ತಿಯ ಕೊಲೆ!
ಅಬ್ಬಲಗೆರೆ ಭಾಗದ ತುಂಗಾ ಚಾನಲ್ನಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಈ ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.














