ಶಿವಮೊಗ್ಗ: ನಗರದ ಶ್ರೀರಾಮಪುರ ರಿಂಗ್ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಶಾಲಾ ಶಿಕ್ಷಕಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ > > ಸಾಗರ, ಗೋಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು, ಓರ್ವ ಆರೋಪಿ ವಶಕ್ಕೆ, ಕಠಿಣ ಕ್ರಮದ ಎಚ್ಚರಿಕೆ!
ಇಲ್ಲಿನ ಶಕ್ತಿಧಾಮ ಲೇಔಟ್ ನಿವಾಸಿ, ಪ್ರೊಫೆಸರ್ ಅವೀಶ್ ಎಸ್.ಟಿ. ಅವರ ಪತ್ನಿ ರೂಪಾ (41) ಮೃತರು.
ಅ. 11ರಂದು ಬೆಳಿಗ್ಗೆ ರೂಪಾ ಅವರು ಮಗ ಪ್ರತೀಕ್ ಜೊತೆ ಶ್ರೀರಾಮಪುರ ರಿಂಗ್ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದಾಗ, ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಬಿಳಿ ಬಣ್ಣದ ಕಾರು ಗಂಗಮ್ಮ ದೇವಿ ದೇವಸ್ಥಾನದ ಮುಂಭಾಗದಲ್ಲಿ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿತ್ತು.
ಇದನ್ನೂ ಓದಿ > > ಶಿವಮೊಗ್ಗ, ರೈಲ್ವೆ ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್!,
ಡಿಕ್ಕಿಯ ರಭಸಕ್ಕೆ ತಲೆ, ಬೆನ್ನು ಹಾಗೂ ಭುಜದ ಭಾಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರೂಪಾ ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅವರು ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಕಾರು ನಿಲ್ಲಿಸದೆ ಪರಾರಿಯಾಗಿದ್ದ ಚಾಲಕನನ್ನು ಸಾರ್ವಜನಿಕರು ಬೆನ್ನಟ್ಟಿ ಆಯನೂರಿನಿಂದ ಘಟನೆ ನಡೆದ ಸ್ಥಳಕ್ಕೆ ಕರೆತಂದಿದ್ದಾರೆ. ಬಳಿಕ ಪರಾರಿಯಾಗಲು ಯತ್ನಿಸಿದ ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.















