• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ವಿಶೇಷ

ಶಿವಮೊಗ್ಗ ಹುಲಿ ಮತ್ತು ಸಿಂಹಧಾಮ ಕೂಲ್‌ಕೂಲ್!, ಏನಿದು ವಿಶೇಷ ವ್ಯವಸ್ಥೆ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 12, 2026
in ವಿಶೇಷ
ಶಿವಮೊಗ್ಗ ಹುಲಿ ಮತ್ತು ಸಿಂಹಧಾಮ ಕೂಲ್‌ಕೂಲ್!, ಏನಿದು ವಿಶೇಷ ವ್ಯವಸ್ಥೆ?
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಅಬ್ಬರ ಹೆಚ್ಚಾಗಿದ್ದು, ಜನರು ಫ್ಯಾನ್, ಎಸಿ, ತಂಪು ಪಾನೀಯಗಳ ಮೊರೆಹೋಗುತ್ತಿದ್ದಾರೆ. ವಿಶೇಷವೇನೆಂದರೆ ಶಿವಮೊಗ್ಗ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಪ್ರಾಣಿ-ಪಕ್ಷಿಗಳನ್ನು ತಂಪಾಗಿರಿಸಲು ಮೃಗಾಲಯ ಪ್ರಾಧಿಕಾರವು ವಿಶೇಷ ’ಕೂಲಿಂಗ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

ಇದನ್ನೂ ಓದಿ >  ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಹೌದು, ವನ್ಯಜೀವಿಗಳಿಗೆ ಈ ತುಂತುರು ನೀರಿನ ಸಿಂಪಡಣೆಯಿಂದ ತಂಪಿನ ವಾತಾವರಣವನ್ನು ನಿರ್ಮಿಸಲಾಗಿದ್ದು, ಪ್ರಾಣಿ-ಪಕ್ಷಿಗಳಿಗೆ ಕಾಡಿನ ನೈಸರ್ಗಿಕ ತಂಪಿನ ಅನುಭವ ನೀಡಲು ಈ ತಂತ್ರಜ್ಞಾನ ಸಹಕಾರಿಯಾಗಿದೆ. ವಿಶೇಷವಾಗಿ ಹುಲಿ, ಸಿಂಹಗಳ ಆವರಣದಲ್ಲಿ ಕೃತಕ ಹೊಂಡಗಳನ್ನು ನಿರ್ಮಿಸಲಾಗಿದ್ದು, ವನ್ಯಜೀವಿಗಳು ನೀರಿನಲ್ಲಿ ಮಿಂದೆದ್ದು ಸಖತ್ ಎಂಜಾಯ್ ಮಾಡುತ್ತಿವೆ. ಇಲ್ಲಿನ ಪ್ರಾಣಿ-ಪಕ್ಷಿಗಳಿಗೆ ಬಿಸಿಲಿನಿಂದ ಯಾವುದೇ ಅಫಾತವಾಗದಂತೆ ದೇಹವನ್ನು ತಪ್ಪು ಮಾಡಿಕೊಳ್ಳಲು ಸಹಾಯಕವಾಗುತ್ತಿದೆ. ಈ ತುಂತುರು ನೀರಿನ ವ್ಯವಸ್ಥೆಯನ್ನು ಕಳೆದ ಮೂರು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ.

ಆಹಾರದಲ್ಲೂ ಬದಲಾವಣೆ

ವನ್ಯಜೀವಿ ತಜ್ಞರು ಹೇಳುವ ಪ್ರಕಾರ ಬಿಸಿಲು ಹೆಚ್ಚಾದಾಗ ಪ್ರಾಣಿ, ಪಕ್ಷಿಗಳ ಆರೋಗ್ಯದ ಮೇಲೂ ಪರಿಣಾಮ ಬೀರಲಿದ್ದು, ಮನುಷ್ಯರಂತೆಯೇ ಪ್ರಾಣಿಗಳಲ್ಲೂ ನಿರ್ಜಲೀಕರಣ  (#Dehydration) ಉಂಟಾಗುವ ಸಾಧ್ಯತೆ ಇರುವುದರಿಂದ, ಅವುಗಳ ಆಹಾರ ಪದ್ಧತಿಯಲ್ಲೂ ಬದಲಾವಣೆ ಮಾಡಲಾಗಿದೆ.
ದೇಹದಲ್ಲಿ ನೀರಿನ ಅಂಶ ಕಾಪಾಡಿಕೊಳ್ಳಲು ಕಲ್ಲಂಗಡಿ, ಮಸ್ಕ್ ಮೆಲನ್, ಖರಬೂಜದಂತಹ ಹಣ್ಣುಗಳನ್ನು ನೀಡಲಾಗುತ್ತಿದ್ದು, ಆಹಾರದ ಜೊತೆಗೆ ಜೀವಸತ್ವಗಳ ಪೂರೈಕೆಗೂ ಒತ್ತು ನೀಡಲಾಗಿದೆ.

ತುಂತುರು ನೀರಿನ ವ್ಯವಸ್ಥೆಗೆ ಪ್ರವಾಸಿಗರು ಸಂತಸ

ಶಿವಮೊಗ್ಗ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಬರುವ ಪ್ರವಾಸಿಗರು ಬಿಸಿಲಿನಿಂದ ಸುಸ್ತಾಗಬಾರದು ಎಂಬ ದೃಷ್ಟಿಯಿಂದ ಪ್ರವೇಶ ದ್ವಾರದಲ್ಲೇ ಮಿಸ್ಟ್ ತುಂತುರು ವ್ಯವಸ್ಥೆ ಮಾಡಲಾಗಿದೆ. ಮೃಗಾಲಯಕ್ಕೆ ಕಾಲಿಡುತ್ತಿದ್ದಂತೆ ಸಿಗುವ ಈ ತಂಪು ಸ್ಪರ್ಶಕ್ಕೆ ಪ್ರವಾಸಿಗರು ಸಂತಸ ವ್ಯಕ್ತಪಡಿಸಿದ್ದು, ಮಕ್ಕಳು ಸಹ ತುಂತುರು ನೀರಿನಲ್ಲಿ ಆಟವಾಡುತ್ತಿರುವ ದೃಶ್ಯಗಳು ಸಹ ಕಂಡು ಬಂದವು. ಈ ವಿಶೇಷ ವ್ಯವಸ್ಥೆಯಿಂದಾಗಿ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡುಬರುತ್ತಿದೆ.

ವನ್ಯಜೀವಿಗಳ ಆರೋಗ್ಯವೇ ನಮಗೆ ಮುಖ್ಯ. ವಿಪರೀತ ಬಿಸಿಲಾದಾಗ ಪ್ರಾಣಿಗಳ ಮೇಲೆ ಒತ್ತಡ ಉಂಟಾಗುತ್ತದೆ. ಅದನ್ನು ತಡೆಯಲು ನಾವು ಮಿಸ್ಟ್ ಮತ್ತು ಜೆಟ್ ಸ್ಪ್ರಿಂಕ್ಲರ್‌ಗಳನ್ನು ಅಳವಡಿಸಿದ್ದೇವೆ. ಇದರಿಂದ ಪ್ರಾಣಿಗಳು ಕ್ರಿಯಾಶೀಲವಾಗಿರಲು ಸಾಧ್ಯವಾಗುತ್ತಿದೆ.
                   -ಅಮರಾಕ್ಷರ, ಕಾರ್ಯನಿರ್ವಾಹಕ ನಿರ್ದೇಶಕರು, ಹುಲಿ ಮತ್ತು ಸಿಂಹಧಾಮ.

ಒಟ್ಟಾರೆಯಾಗಿ ಶಿವಮೊಗ್ಗ ಮೃಗಾಲಯವು ಪ್ರಾಣಿ ಸ್ನೇಹಿ ಕ್ರಮಗಳ ಮೂಲಕ ಇತರ ಮೃಗಾಲಯಗಳಿಗೆ ಮಾದರಿಯಾಗಿದೆ.

Tags: For wildlifekannada newskannada news livelatest newsmalnad newsShivamogga Tiger and Lion safariShivamogga Tiger and Lion Sanctuary is cool!what is this special arrangement?ಶಿವಮೊಗ್ಗಹುಲಿ ಮತ್ತು ಸಿಂಹಧಾಮ
Previous Post

ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

Next Post

ಶಿಕಾರಿಪುರದಲ್ಲಿ ಬಸ್ ಪಲ್ಟಿ, 27 ಜನರಿಗೆ ಗಾಯ, ಹೇಗಾಯ್ತು ಘಟನೆ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿಕಾರಿಪುರದಲ್ಲಿ ಬಸ್ ಪಲ್ಟಿ, 27 ಜನರಿಗೆ ಗಾಯ, ಹೇಗಾಯ್ತು ಘಟನೆ?

ಶಿಕಾರಿಪುರದಲ್ಲಿ ಬಸ್ ಪಲ್ಟಿ, 27 ಜನರಿಗೆ ಗಾಯ, ಹೇಗಾಯ್ತು ಘಟನೆ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL