ಶಿವಮೊಗ್ಗ : ಅನುಪಿನಕಟ್ಟೆ ರಸ್ತೆಯಲ್ಲಿರುವ ತುಂಗಾ ಮೇಲ್ದಂಡೆ ಚಾಲನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ತುಂಗಾ ನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ಸೈಯದ್ (24), ಮಲ್ಲಿಕ್ (22) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬಂದ ವ್ಯಕ್ತಿಗೆ ಕಾದಿತ್ತು ಶಾಕ್!, ಆಗಿದ್ದೇನು?
ಜೂನ್ 29 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಅನುಪಿನಕಟ್ಟೆಯ ರಸ್ತೆಯಲ್ಲಿರುವ ತುಂಗಾ ಮೇಲ್ದಂಡೆ ಚಾನಲ್ ಹತ್ತಿರ ಇಬ್ಬರು ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ತುಂಗಾನಗರ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಬಂಧಿತರಿಂದ ಸುಮಾರು 60,000/- ರೂ ಮೌಲ್ಯದ 01 ಕೆಜಿ 270 ಗ್ರಾಂ ತೂಕದ ಗಾಂಜಾವನ್ನು ಹಾಗೂ 600/- ರೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > ಭದ್ರಾ ಜಲಾಶಯದಿಂದ ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರಿಲ್ಲ!
ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















