ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಶ್ರಯ ಬಡಾವಣೆ ಬೊಮ್ಮನಕಟ್ಟೆ ಡಿ ಬ್ಲಾಕ್ನ ಮನೆಯಲ್ಲಿ ನಡೆದ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರವಿ ಬೆಕ್ಕು(27) ಹಾಗೂ ಗಣೇಶ್ ಗಣಿ(26) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > ಎರಡು ಕಾರುಗಳ ನಡುವೆ ಭೀಕರ ಅಪಘಾತ, ವಾಹನಗಳು ಜಖಂ!
ಬಂಧಿತರಿಂದ 51 ಗ್ರಾಂ ಬಂಗಾರದ ಆಭರಣಗಳು (ಅಂದಾಜು 6 ಲಕ್ಷ) ಹಾಗೂ 27 ಗ್ರಾಂ ಬೆಳ್ಳಿಯ ವಸ್ತುಗಳು (4,000) ಸೇರಿದಂತೆ ಒಟ್ಟು 6,04,000 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜೂನ್ 12ರ ಮಧ್ಯಾಹ್ನ 2.00 ಗಂಟೆಯಿಂದ ಜೂನ್ 17ರ ಬೆಳಿಗ್ಗೆ 5.30ರ ಅವಧಿಯಲ್ಲಿ ಮನೆ ನಂ.246ರಲ್ಲಿ ಯಾರೋ ಕಳ್ಳರು ಬೀಗ ಮುರಿದು 60.7 ಗ್ರಾಂ ಬಂಗಾರದ ಆಭರಣಗಳು, 60 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ 5,000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಸಂಬಂಧ ಮನೆಯ ಮಾಲೀಕರಾದ ರಾಮು ಜಿ (40) ಅವರು ಜೂನ್ 17ರಂದು ಬೆಳಿಗ್ಗೆ 7.30ಕ್ಕೆ ದೂರು ನೀಡಿದ್ದರು.
ಇದನ್ನೂ ಓದಿ > ಭದ್ರಾವತಿಯ ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆ
ದೂರಿನ ಮೇರೆಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ 2023ರ ಕಲಂ 331(3), 331(4), 305 ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಇದನ್ನೂ ಓದಿ > ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್
ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ. ನಿಖಿಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜಿ. ಕಾರಿಯಪ್ಪ, ಉಪಾಧೀಕ್ಷಕ ಟಿ.ಡಿ. ಸಂಜೀವ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕ ಡಿ.ಕೆ. ಸಂತೋಷ ಕುಮಾರ್ ಅವರ ನೇತೃತ್ವದಲ್ಲಿ ಪಿಎಸ್’ಐ ತಿರುಮಲೇಶ್ ಜಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿತು.
ಈ ಪತ್ತೆ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಅವರು ಶ್ಲಾಘಿಸಿದ್ದಾರೆ.













