ಶಿವಮೊಗ್ಗ: ವೀಲಿಂಗ್ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಯುವಕರ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.’

ಇದನ್ನೂ ಓದಿ > ಶಿವಮೊಗ್ಗ, ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ, ಘಟನೆ ಆಗಿದ್ದೇಲ್ಲಿ?
ಈ ಘಟನೆ ಶಿವಮೊಗ್ಗದ ವಿಮಾನ ನಿಲ್ದಾಣ ರಸ್ತೆಯ ಪುಟ್ಟಪ್ಪ ಕ್ಯಾಂಪ್ ಬಳಿ ನಡೆದಿದೆ. ಇಬ್ಬರು ಯುವಕರು ತಮ್ಮ ಮೊಪೆಡ್ ವಾಹನದಲ್ಲಿ ವೀಲಿಂಗ್ ನಡೆಸಿದ್ದರು. ಈ ದೃಶ್ಯಗಳನ್ನು ಚಿತ್ರೀಕರಿಸಿ ಇನ್‌ಸ್ಟಾಗ್ರಾಮ್ ಅಥವಾ ಫೇಸ್‌ಬುಕ್‌ನಂತಹ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಈ ವಿಡಿಯೋ ಸಂಚಾರಿ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆಯೇ, ಬೈಕ್‌ನ ನಂಬರ್ ಪ್ಲೇಟ್ ಆಧಾರದ ಮೇಲೆ ಯುವಕರನ್ನು ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.














