• About Us
  • Advertise
  • Privacy & Policy
  • Contact Us
Friday, June 12, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ನಾಳೆ ಸಂಜೆ 5 ಕ್ಕೆ ಸೈರನ್ ಸದ್ದು, ಕಾರಣವೇನು?

ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ- ಆತಂಕ ಬೇಡ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 4, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ನಾಳೆ ಸಂಜೆ 5 ಕ್ಕೆ ಸೈರನ್ ಸದ್ದು, ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ: ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ಜೂ.5 ರ ಸಂಜೆ 5 ಗಂಟೆಗೆ ‘ಮಾಕ್ ಡ್ರಿಲ್’ (ಅಣಕು ಪ್ರದರ್ಶನ) ಆಯೋಜಿಸಲಾಗಿದೆ. ಇದು ಕೇವಲ ಮುನ್ನೆಚ್ಚರಿಕೆ ಮತ್ತು ತರಬೇತಿಯ ಪ್ರದರ್ಶನವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯಲ್ಲಿ ಆತಂಕಕ್ಕೊಳಗಾಗಬಾರದು ಎಂದು ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕಾರಿಯಪ್ಪ ತಿಳಿಸಿದ್ದಾರೆ.

ಗುರುವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಕುರಿತು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಅಣಕು ಪ್ರದರ್ಶನದ ಪೂರ್ವಭಾವಿ ಸಿದ್ದತೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದನ್ನೂ ಓದಿ >  ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೇಲ್ಲಿ ಎಷ್ಟು ಮಳೆಯಾಗಿದೆ.?

ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಮಾತನಾಡಿ, 2026 ನೇ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ನಾಗರೀಕ ರಕ್ಷಣೆ, ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಅಣಕು ಪ್ರದರ್ಶನ ನಡೆಸಲು ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದ್ದು ಈ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿಯೂ ಶುಕ್ರವಾರ ಸಂಜೆ 5 ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್ ಏರ್ಪಡಿಸಲಾಗಿದೆ.

ಆಕಸ್ಮಿಕ ವಾಯುದಾಳಿ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಸಾರ್ವಜನಿಕರನ್ನು ಹೇಗೆ ಸುರಕ್ಷಿತ ಸ್ಥಳಗಳಿಗೆ ರವಾನಿಸಬೇಕು, ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ನೆರವು ಹೇಗೆ ಒದಗಿಸಬೇಕು ಮತ್ತು ವಿವಿಧ ಇಲಾಖೆಗಳು ಹೇಗೆ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂಬುದನ್ನು ಪ್ರಾಯೋಗಿಕವಾಗಿ ಪರೀಕ್ಷಿಸುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ.

ಈ ಅಣಕು ಪ್ರದರ್ಶನವು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಗೃಹರಕ್ಷಕದಳ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ನಾಗರೀಕ ರಕ್ಷಣಾ ಸ್ವಯಂ ಸೇವಕರು, ಗೃಹರಕ್ಷಕರು, ಎನ್‌ಸಿಸಿ ಹಾಗೂ ಮಹಾನಗರಪಾಲಿಕೆ, ಆರೋಗ್ಯ ಇಲಾಖೆ, ಕೆಎಸ್‌ಆರ್‌ಟಿಸಿ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ನಡೆಯಲಿದೆ.

ಸೈರನ್ ಮೊಳಗಿಸುವಿಕೆ : ಸಾರ್ವಜನಿಕರು ಗಾಬರಿಯಾಗಬೇಡಿ

ವೈಮಾನಿಕ ದಾಳಿಯ ಮುನ್ಸೂಚನೆ ನೀಡುವ 2 ನಿಮಿಷಗಳ ಸೈರನ್ ಮೊಳಗಿಸಲಾಗುವುದು. ಸೈರನ್ ಸದ್ದು ಕೇಳಿದ ತಕ್ಷಣ ನಾಗರಿಕರು ಗಾಬರಿಯಾಗಬಾರದು.ಇದು ಕೇವಲ ತರಬೇತಿಯ ಪ್ರಕ್ರಿಯೆಯಾಗಿದ್ದು, ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ >  ಬೆಕ್ಕುಗಳ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಹೊಡೆದಾಟ!

ತಾಲೀಮಿನ ಸಂದರ್ಭದಲ್ಲಿ ಅಗ್ನಿಶಾಮಕ ದಳ, ಪೊಲೀಸ್ ವಾಹನಗಳು ಹಾಗೂ ಆಂಬ್ಯುಲೆನ್ಸ್ಗಳ ಸಂಚಾರ ಇರಲಿದೆ, ಸುರಕ್ಷಿತ ಸ್ಥಳಗಳಿಗೆ ಜನರನ್ನು ಸ್ಥಳಾಂತರಿಸುವುದು, ಹುಡುಕಾಟ ಮತ್ತು ರಕ್ಷಣೆ ಹಾಗೂ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಲು ಆಸ್ಪತ್ರೆಗೆ ಸಾಗಿಸುವ ಪ್ರದರ್ಶನವಿರುತ್ತದೆ ಎಂದರು.

ನಗರದಲ್ಲಿ ನಡೆಯಲಿರುವ ಈ ತಾಲೀಮು ಕೇವಲ ನಾಗರಿಕರ ಸುರಕ್ಷತೆ ಮತ್ತು ಜಾಗೃತಿಗಾಗಿ ಹಮ್ಮಿಕೊಂಡಿರುವ ಸಾಂಪ್ರದಾಯಿಕ ಸಿದ್ಧತೆಯಾಗಿದ್ದು ಸಾರ್ವಜನಿಕರು ಸಹ ವೀಕ್ಷಿಸಲು ಭಾಗವಹಿಸಬಹುದು ಎಂದು ತಿಳಿಸಿದರು.

ಎಎಸ್‌ಪಿ ಕಾರಿಯಪ್ಪ ಮಾತನಾಡಿ, ವಿವಿಧ ಇಲಾಖೆಗಳು, ಸಂಸ್ಥೆಗಳಿಗೆ ನೀಡಿದ ಜವಾಬ್ದಾರಿಯನ್ನು ಸಮರ್ಪಕವಾಗಿ ಸಂಬಂಧಿಸಿದವರು ನಿರ್ವಹಿಸಬೇಕು. ಅಣಕು ಪ್ರದರ್ಶನ ವೇಳೆ ಯಾರಿಗೂ ಯಾವುದೇ ರೀತಿಯಲ್ಲಿ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ಈ ಅಣಕು ಪ್ರದರ್ಶನದಲ್ಲಿ ವೈಮಾನಿಕ ದಾಳಿ, ದಾಳಿಯಿಂದ ಹಾನಿಗೊಳಗಾದ ಗುಡಿಸಲು, ರಕ್ಷಣೆಗೆ ಅಗತ್ಯವಾದ ಅಗ್ನಿ ಶಾಮಕ ದಳ, ರಕ್ಷಣಾ ಪಡೆ, ಆಂಬುಲೆನ್ಸ್ , ಆಸ್ಪತ್ರೆ, ಕೇಂದ್ರ ಮಾಹಿತಿ ಕೇಂದ್ರ ಹೀಗೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಮತ್ತು ಡ್ರೋನ್ ವಿಡಿಯೋಕರಣ ಸಹ ಮಾಡಲಾಗುವುದು. ಇದು ಕೇವಲ ರಕ್ಷಣಾ ಸಿದ್ದತೆಯ ಪರಿಶೀಲನೆಗಾಗಿ ನಡೆಸುವ ಕೃತಕ ಅಣಕು ಪ್ರದರ್ಶನವಾದ್ದರಿಂದ ಸಾರ್ವಜನಿಕರಲ್ಲಿ ಯಾವುದೇ ರೀತಿಯ ಆತಂಕ ಬೇಡವಾಗಿದ್ದು ಸಾರ್ವಜನಿಕರು ವೀಕ್ಷಿಸಬಹುದು ಎಂದು ತಿಳಿಸಿದರು.

ಇದನ್ನೂ ಓದಿ >  ತಾಲ್ಲೂಕು ಕಚೇರಿಯಲ್ಲಿ ರೈತನ ಏಕಾಂಗಿ ಧರಣಿ

ಸಭೆಯಲ್ಲಿ ಡಿಹೆಚ್‌ಓ ಡಾ.ನಟರಾಜ್ ಕೆ ಎಸ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಗೀತಾ, ಡಿಎಸ್‌ಪಿ ಡಿಆರ್ ದಿಲೀಪ್ ಕುಮಾರ್, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಇಲಾಖೆ, ಪಾಲಿಕೆ, ಕೆಎಸ್‌ಆರ್‌ಟಿಸಿ, ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Tags: kannada news livelatest newsmalnad newsshimogashivamoggaSiren sounds in Shivamogga tomorrow at 5 pmwhat is the reason?ಶಿವಮೊಗ್ಗ
Previous Post

ಬೆಕ್ಕುಗಳ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಹೊಡೆದಾಟ!

Next Post

‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ, ಶಿವಮೊಗ್ಗದಲ್ಲಿ ಸಂದರ್ಶನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ, ಶಿವಮೊಗ್ಗದಲ್ಲಿ ಸಂದರ್ಶನ

'ಕಾಯಕ ಸೇತು' ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ, ಶಿವಮೊಗ್ಗದಲ್ಲಿ ಸಂದರ್ಶನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

June 12, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

June 12, 2026
ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

June 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಭೀಕರ ಕೊಲೆ!

June 12, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಹೊಸನಗರ, ಟ್ರ್ಯಾಕ್ಟರ್-ಕಾರು ನಡುವೆ ಡಿಕ್ಕಿ

June 12, 2026

Copyright © 2026 Yuva Dhwani. Designed by KIPL