• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 27, 2026
in ಶಿವಮೊಗ್ಗ
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ
Share on FacebookShare on TwitterShare on WhatsApp

ಸೊರಬ: ಎಸ್. ಬಂಗಾರಪ್ಪ ವಿಚಾರ ವೇದಿಕೆ ಹಾಗೂ ಎಸ್. ಬಂಗಾರಪ್ಪ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ 94ನೇ ಜನ್ಮದಿನ ಕಾರ್ಯಕ್ರಮದಲ್ಲಿ  ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಧಾನ ಪರಿಷತ್‌ ಸಭಾಪತಿ ಸಲೀಂ ಅಹಮದ್‌, ಸಚಿವರಾದ ಅಜಯ್‌ ಧರ್ಮಸಿಂಗ್‌, ಮಧು ಬಂಗಾರಪ್ಪ, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಸ್‌ ಬಾನು, ಮಾಜಿ ಶಾಸಕ ಮಹಿಮಾ ಪಟೇಲ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹೆಚ್.ಸಿ.ಯೋಗೇಶ್‌, ರಾಜ್ಯ ಕೈಮಗ್ಗ ಮತ್ತು ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್‌ ಕೆ.ಗೌಡ, ಸೂಡಾ ಅಧ್ಯಕ್ಷ ಸಿ.ಜೆ.ಮಧುಸೂದನ್‌ ಸೇರಿ ಹಲವರು ಬಂಗಾರಧಾಮದಲ್ಲಿ ಬಂಗಾರಪ್ಪ ಅವರ ಸಮಾಧಿಗೆ ನಮನ ಸಲ್ಲಿಸಿದರು.

ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ

ಚಾಮರಾಜನಗರದ ಪ್ರೊ. ಜಿ.ಎಸ್. ಜಯದೇವ ಅವರಿಗೆ ‘ಸೇವಾ ಬಂಗಾರ’, ತುಮಕೂರಿನ ಪ್ರೊ. ನಟರಾಜ್ ಹುಳಿಯಾರ್ ಅವರಿಗೆ ‘ಸಾಹಿತ್ಯ ಬಂಗಾರ’, ಗುಲ್ಬರ್ಗಾದ ಶೇಖ್ ಮಾಸ್ತರ್ ಅವರಿಗೆ ‘ರಂಗ ಬಂಗಾರ’ ಹಾಗೂ ಬೆಂಗಳೂರಿನ ಬಿ.ಸಿ. ರಮೇಶ್ ಅವರಿಗೆ ‘ಕ್ರೀಡಾ ಬಂಗಾರ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸೇವಾ ಬಂಗಾರ ಪ್ರಶಸ್ತಿ ಪುರಸ್ಕೃತರಾದ  ಜಿ.ಎಸ್.ಜಯದೇವ ಮಾತನಾಡಿ,  ಶಾಲೆಯಲ್ಲಿ ಕಲಿತದ್ದನ್ನೆಲ್ಲ ಮರೆತ ನಂತರ ಮಗು ಏನನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತದೆಯೋ ಅದುವೇ ಶಿಕ್ಷಣ. ಎರಡನೆಯದ್ದು ಯಶಸ್ವಿ ಮನುಷ್ಯರ ಉತ್ಪಾದನೆ ಶಿಕ್ಷಣದ ಉದ್ದೇಶವಲ್ಲ. ಯಶಸ್ವಿ ವ್ಯಕ್ತಿಗಳು ಸಮಾಜದಲ್ಲಿ ತೆಗೆದುಕೊಳ್ಳುವುದು ಹೆಚ್ಚು ಕೊಡುವುದು ಕಡಿಮೆ. ಸಮಾಜಕ್ಕೆ ಹಿಂತಿರುಗಿ ಕೊಡುವವರನ್ನು ತಯಾರಿಸುವುದು ಶಿಕ್ಷಣದ ಉದ್ದೇಶ. ಐನ್‌ಸ್ಟೈನ್‌ ಉದ್ದೇಶಗಳ ದೃಷ್ಟಿಯಿಂದ ನೋಡಿದಾಗ ಇಂದಿನ ಶಿಕ್ಷಣ ವಿಫಲವಾಗಿದೆ. ಮಕ್ಕಳು ಶಾಲೆಯಿಂದ ಹೊರಗೆ ಕಲಿಯುವುದು ಹೆಚ್ಚು. ನಾಲ್ಕು ಗೋಡೆ ಮಧ್ಯೆ ಕೂಡಿ ಹಾಕುವುದರಿಂದ ಕಲಿಕೆ ಕಡಿಮೆ. ಶಾಲೆಗಳಿಂದ ಸಾಮಾಜಿಕ ಬದಲಾವಣೆ ಸಾದ್ಯ ಎಂದರು.

ಸಾಹಿತ್ಯ ಬಂಗಾರ ಪ್ರಶಸ್ತಿ ಪುರಸ್ಕೃತ ಪ್ರೊ. ನಟರಾಜ್‌ ಹುಳಿಯಾರ್‌ ಮಾತನಾಡಿ, ‘ರಾಜಕೀಯ ಸವಾಲುಗಳನ್ನು ರಾಜಕೀಯವಾಗಿ, ವಿಚಾರದ ಸವಾಲುಗಳನ್ನು ವೈಚಾರಿಕವಾಗಿ, ಚಳವಳಿಯ ಸವಾಲುಗಳನ್ನು ಚಳವಳಿ ಜೊತೆಗೆ ಮಾತನಾಡಬೇಕು ಎಂಬುದು ಬಂಗಾರಪ್ಪ ಅವರ ನಿಲುವಾಗಿತ್ತು. ಈಚೆಗೆ ಸಿದ್ದರಾಮಯ್ಯ ಅವರು ಒಂದು ಹೇಳಿಕೆ ನೀಡಿದ್ದರು. ಹಿಂದುಳಿದ ವರ್ಗದವರು ಅಧಿಕಾರ ಕಿತ್ತುಕೊಳ್ಳಬೇಕು ಎಂದು ಹೇಳಿದ್ದರು. ಅದನ್ನೇ ಬಂಗಾರಪ್ಪ ಅಂದು ಮಾಡಿದ್ದರು. ಅವರ ನಂತರ ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ ಅವರು ಅಧಿಕಾರ ಕಿತ್ತುಕೊಂಡರು. ಅದಕ್ಕೆ ಬಂಗಾರಪ್ಪ ಅವರು ಪ್ರೇರಣೆಯಾಗಿದ್ದರು. ಸ್ಟಿಂಗ್‌ ಆಪರೇಷನ್‌ ಮಾಡಿ ಹೀನ ರಾಜಕೀಯ ಮಾಡುವುದು ಬಿಟ್ಟು ಬಂಗಾರಪ್ಪ ಅವರ ಆದರ್ಶ ಪಾಲಿಸಬೇಕು ಎಂದರು.

ಬಂಗಾರಪ್ಪ ಅವರ ಕಪ್ಪು ಕನ್ನಡಕದ ಹಿಂದಿನ ಕನಸು ಶಾಶ್ವತ ನನಸಾಗಬೇಕು. ಅವರ ಚಿಂತನೆಗಳು ಮುಂದುವರೆಯಬೇಕು. ಬಂಗಾರಪ್ಪ ಅವರ ಮಕ್ಕಳಾಗಿ ಅವರ ಎಲ್ಲ ಸಾಧನೆಗಳು ನಮಗೆ ಗೊತ್ತಿಲ್ಲ. ಅದರೆ ಇಂತಹ ಕಾರ್ಯಕ್ರಮಗಳ ಮೂಲಕ ಹಲವರು ಚಿಂತಕರು ಬಂಗಾರಪ್ಪ ಅವರ ಕುರಿತ ಹಲವು ಸಂಗತಿಗಳನ್ನು ತಿಳಿಸಿ ನಮ್ಮೆಲ್ಲರನ್ನು ಜಾಗೃತಗೊಳಿಸುತ್ತಿದ್ದಾರೆ.

– ಮಧು ಬಂಗಾರಪ್ಪ, ಸಚಿವರು

ಶಿವಮೊಗ್ಗ:ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಶಿವಮೊಗ್ಗದ ವತಿಯಿಂದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ನವರ ಹುಟ್ಟು ಹಬ್ಬದ ಆಚರಣೆ ಅಂಗವಾಗಿ ಮೆಗ್ಗಂ ಆಸ್ಪತ್ರೆಯ ರೋಗಿಗಳಿಗೆ ಬ್ಲಡ್ ಹಾಗೂ ಹಣ್ಣನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್‍ಸಿ ಯೋಗೇಶ್, ಮಾಜಿ ಅಧ್ಯಕ್ಷ ಆರ್ ಪ್ರಸನ್ ಕುಮಾರ್, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ರಮೇಶ ಶಂಕರ್ ಘಟ್ಟ, ಪ್ರಮುಖರಾದ ಜಿಡಿ ಮಂಜುನಾಥ್,  ರಮೇಶ್ ಇಕ್ಕೇರಿ, ಕಲಗೋಡು ರತ್ನಾಕರ್, ಬೋರೇಗೌಡ್ರು, ಜ್ಯೋತಿ ಅರಳಪ್ಪ, ಎಸ್ ವಿಜಯ್ ಕುಮಾರ್, ವಿಶ್ವನಾಥ್ ಕಾಶಿ, ಗೀತೆೇಂದ್ರಾ ಗೌಡ ಮೆಗನ್ ಆಸ್ಪತ್ರೆಯ ಅಧ್ಯಕ್ಷರಾದ ಡಾ ತಿಮ್ಮಪ್ಪ, ಜಿಲ್ಲಾ ಸರ್ಜನ್ ಡಾ ನಾಗೇಶ್. ಮತ್ತಿತರರು ಇದ್ದರು.

Tags: kannada newskannada news livelatest newsshimogashivamoggaSoraba: Gold Awards Presented to Four Achieversಶಿವಮೊಗ್ಗ
Previous Post

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ವಿಷ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಸಾವು, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Copyright © 2026 Yuva Dhwani. Designed by KIPL