• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶ್ರೀ ಮಾರಿಕಾಂಬ ದೇವಿ ಜಾತ್ರೆ, ವಾಹನಗಳ ಸಂಚಾರ ಮಾರ್ಗ ಬದಲಾವಣೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 23, 2026
in ಶಿವಮೊಗ್ಗ
ಶ್ರೀ ಮಾರಿಕಾಂಬ ದೇವಿ ಜಾತ್ರೆ, ವಾಹನಗಳ ಸಂಚಾರ ಮಾರ್ಗ ಬದಲಾವಣೆ
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವವು ಫೆ.24 ರಿಂದ 28 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ ಜಾತ್ರಾ ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಕಾರು, ದ್ವಿಚಕ್ರ, ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವುದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಕಾರಣ ನಗರದ ಗಾಂಧಿಬಜಾರ್ ಮತ್ತು ಮಾರಿಕಾಂಬ ದೇವಸ್ಥಾನದ ಸುತ್ತಮುತ್ತಲಿನ ಹಾಗೂ ಹೊಳಬಸ್ ಸ್ಟಾö್ಯಪ್, ಶಂಕರಮಠ ರಸ್ತೆ, ಬಿ.ಹೆಚ್.ರಸ್ತೆ, ಕೋಟೆ ರಸ್ತೆ, ಎಸ್.ಪಿ.ಎಂ.ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಶಿವಪ್ಪ ನಾಯಕ ಸರ್ಕಲ್ ಹಾಗೂ ಸುತ್ತಮುತ್ತ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಈ ಕೆಳಗಿನಂತೆ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶ ಹೊರಡಿಸಿದ್ದಾರೆ.
ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಸ್ತೆಗಳಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು. ಫೆ. 24 ರಿಂದ 28ರವರೆಗೆ ಹೊಳಬಸ್ ಸ್ಟಾಪ್‌ನಿಂದ – ಬೆಕ್ಕಿನ ಕಲ್ಮಠ-ರಾಮಣ್ಣ ಶ್ರೇಷ್ಠಿ ಪಾರ್ಕ್ವರೆಗೆ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು. ಫೆ. 24 ರಂದು ಬೆಳಗ್ಗೆ 3.00 ಗಂಟೆಯಿಂದ ರಾ.11.00 ಗಂಟೆಯವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಗಾಂಧಿ ಬಜಾರ್-ಶಿವಪ್ಪನಾಯಕ ಸರ್ಕಲ್‌ವರೆಗೆ ಮತ್ತು ಶಿವಪ್ಪ ನಾಯಕ ಸರ್ಕಲ್ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು.
ಬೆಂಗಳೂರು- ಭದ್ರಾವತಿ-ಎನ್.ಆರ್.ಪುರ ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‌ಗಳು ಎಂಆರ್‌ಎಸ್ ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಚಿತ್ರದುರ್ಗ-ಹೊಳೆಹೊನ್ನೂರು ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‌ಗಳು ವಿದ್ಯಾನಗರ-ಎಂ.ಆರ್.ಎಸ್. ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಹೊನ್ನಾಳಿ-ಹೊಳಲೂರು ಕಡೆಯಿಂದ ಬರುವ ಭಾರಿ ವಾಹನಗಳು, ಸರಕು ಸಾಗಣೆ ವಾಹನಗಳು ಮತ್ತು ಬಸ್‌ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್- ಕೆಇಬಿ ಸರ್ಕಲ್- ರೈಲ್ವೆ ಸ್ಟೇಷನ್-ಉಷಾ ನರ್ಸಿಂಗ್ ಹೋಂ ಸರ್ಕಲ್- 100 ಅಡಿ ರಸ್ತೆ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಶಿಕಾರಿಪುರ ಸವಳಂಗದಿಂದ ಬರುವ ಎಲ್ಲಾ ಭಾರಿ ವಾಹನ, ಎಲ್ಲಾ ಬಸ್‌ಗಳನ್ನು ಉಷಾ ನರ್ಸಿಂಗ್ ಹೋಂ, ಲಕ್ಷ್ಮೀ ಟಾಕೀಸ್, ಪೊಲೀಸ್ ಚೌಕಿ, ಆಲ್ಕೋಳ ಮುಖಾಂತರ ಸಾಗರ ರಸ್ತೆಯಲ್ಲಿ ಹೋಗುವುದು. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಸಂದೇಶ್ ಮೋಟಾರ್ಸ್-ಬೈಪಾಸ್ ರಸ್ತೆ ಮೂಲಕ ಸಂಚರಿಸುವುದು. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರಿ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೊಳ ಸರ್ಕಲ್, ಪೊಲೀಸ್ ಚೌಕಿ, ಉಷಾ ನರ್ಸಿಂಗ್ ಹೋಂ, ಸವಳಂಗ ರಸ್ತೆ ಮೂಲಕ ಹೋಗುವುದು.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತೀಗಣ್ಯ ವ್ಯಕ್ತಿಗಳ ವಾಹನಗಳು, ಅಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿ ಸಂಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಲಾಗಿದೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwanismg@gmail.com

Tags: kannada newskannada news livelatest newsmalnad newsMARIKAMBA JATHREshimogashivamoggaಮಾರಿಕಾಂಬ ದೇವಿ ಜಾತ್ರೆವಾಹನಗಳ ಸಂಚಾರ ಮಾರ್ಗ ಬದಲಾವಣೆಶಿವಮೊಗ್ಗ
Previous Post

ಮಾರಿಕಾಂಬ ಜಾತ್ರೆ, ದೇವಾಲಯದಲ್ಲಿ ಬ್ಯೂಟಿಫುಲ್ ಅಲಂಕಾರ, ಅಲಂಕಾರದ ಫೋಟೊಗಳು ಇಲ್ಲಿವೆ.

Next Post

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನ, ಯುವಕನ ರಕ್ಷಣೆ ಮಾಡಿದ ಪೊಲೀಸರು!, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನ, ಯುವಕನ ರಕ್ಷಣೆ ಮಾಡಿದ ಪೊಲೀಸರು!, ಆಗಿದ್ದೇನು?

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನ, ಯುವಕನ ರಕ್ಷಣೆ ಮಾಡಿದ ಪೊಲೀಸರು!, ಆಗಿದ್ದೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL