ಬೆಂಗಳೂರು: 2026-27ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಶಿಕ್ಷಣ ಇಲಾಖೆಗೆ ಈ ಬಾರಿಯೂ ಸಹ ಸಿಂಹ ಪಾಲಿನ ಅನುದಾನವನ್ನು ನೀಡಿದ್ದಾರೆ.
ಈ ಬಾರಿಯೂ ಸಹ ಶಿಕ್ಷಣ ಇಲಾಖೆಗೆ ಅತಿ ಹೆಚ್ಚು ಅನುದಾನ ನೀಡುತ್ತಾರೆ ಎಂಬ ನಿರೀಕ್ಷೆಯಿತ್ತು. ಅದರಂತೆಯೇ ಶಿಕ್ಷಣ ಇಲಾಖೆಗೆ ಅತಿ ಹೆಚ್ಚು ಅಂದರೆ 47,224 ಕೋಟಿ ರೂ. ಅನುದಾನ,
ಇನ್ನು ಗೃಹಲಕ್ಷ್ಮೀ ಯೋಜನೆಗಳನ್ನು ಒಳಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

ಯಾವ ಇಲಾಖೆಗೆ ಎಷ್ಟು ಅನುದಾನ?
- ಶಿಕ್ಷಣ: 47,224 ಕೋಟಿ ರೂ.
- ಮಹಿಳಾ ಮತ್ತು ಮಕ್ಕಳ ಕಲ್ಯಾಣ: 34,929 ಕೋಟಿ ರೂ.
- ಇಂಧನ: 29,947 ಕೋಟಿ ರೂ.
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: 26,559 ಕೋಟಿ ರೂ.
- ಲೋಕೋಪಯೋಗಿ ಮತ್ತು ಸಾರಿಗೆ: 23,100 ಕೋಟಿ ರೂ.
- ನೀರಾವರಿ: 22,436 ಕೋಟಿ ರೂ.
- ನಗರಾಭಿವೃದ್ಧಿ ಮತ್ತು ವಸತಿ: 22,203 ಕೋಟಿ ರೂ.
- ಕಂದಾಯ: 19,843 ಕೋಟಿ ರೂ.
- ಸಮಾಜ ಕಲ್ಯಾಣ: 18,612 ಕೋಟಿ ರೂ.
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ: 17,817 ಕೋಟಿ ರೂ.
- ಒಳಾಡಳಿತ (ಗೃಹ): 11,424 ಕೋಟಿ ರೂ.
- ಕೃಷಿ ಮತ್ತು ತೋಟಗಾರಿಕೆ: 8,373 ಕೋಟಿ ರೂ.
- ಆಹಾರ ಮತ್ತು ನಾಗರಿಕ ಸರಬರಾಜು: 7,942 ಕೋಟಿ ರೂ.
- ಪಶುಸಂಗೋಪನೆ ಮತ್ತು ಮೀನುಗಾರಿಕೆ: 4,084 ಕೋಟಿ ರೂ.
- ಇತರೆ ವಲಯಗಳು: 1,72,757 ಕೋಟಿ ರೂ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com













