ಶಿವಮೊಗ್ಗ : ಸಿಪಿಐ ದೇವರಾಜ್ ನೇತೃತ್ವದಲ್ಲಿ ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು ವಾಹನಗಳ ದಿಢೀರ್ ತಪಾಸಣೆ ಕಾರ್ಯಾಚರಣೆ ನಡೆಸಿದರು. ಈ ವೇಳೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧ 4 ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗದ ಲಾಡ್ಜ್‌ಗಳಲ್ಲಿ ಪೊಲೀಸರಿಂದ ತಪಾಸಣೆ
ಶಿವಮೊಗ್ಗ ನಗರದ ಪ್ರಮುಖ ಸ್ಥಳಗಳಲ್ಲಿ ಸಂಚಾರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಶಾಲೆ, ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನಗಳು, ಬಸ್ಸುಗಳನ್ನು ತಡೆದು ತಪಾಸಣೆ ನಡೆಸಿದರು. ಚಾಲಕರು ಮದ್ಯ ಸೇವನೆ ಮಾಡಿರುವ ಕುರಿತು ಪರಿಶೀಲಿಸಿದರು. ಈ ಸಂದರ್ಭ ನಾಲ್ಕು ಮಂದಿ ಚಾಲಕರು ಮದ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಸಂಚಾರಣೆ ಠಾಣೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ > ಕುಸಿದ ಶರಾವತಿ ಹಿನ್ನೀರು ಮಟ್ಟ, ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ!
ಇದೇ ವೇಳೆ ಶಾಲಾ ವಾಹನದ ವಿಮೆ, ಎಮಿಷನ್ ರಿಪೋರ್ಟ್ ಹಾಗೂ ಫಿಟ್‌ನೆಸ್ ಸರ್ಟಿಫಿಕೇಟ್ ಅನ್ನು ಕಡ್ಡಾಯವಾಗಿ ಚಾಲ್ತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಿದರು. ಅಲ್ಲದೆ ವಾಹನಗಳ ಸುಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು














