• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

 ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ!, ಅಂತ್ಯಸಂಸ್ಕಾರಕ್ಕೆ ರೈಲ್ವೆ ಹಳಿ ದಾಟುವ ಅನಿವಾರ್ಯತೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 10, 2026
in ಶಿವಮೊಗ್ಗ, ವಿಶೇಷ
 ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ!, ಅಂತ್ಯಸಂಸ್ಕಾರಕ್ಕೆ ರೈಲ್ವೆ ಹಳಿ ದಾಟುವ ಅನಿವಾರ್ಯತೆ
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 1ರ ಸೋಮಿನಕೊಪ್ಪ ಭೋವಿ ಕಾಲೋನಿ ನಿವಾಸಿಗಳು ಮೂಲಭೂತ ಸೌಕರ್ಯದ ಕೊರತೆಯಿಂದ ಗಂಭೀರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸ್ಮಶಾನಕ್ಕೆ ಸಂಪರ್ಕಿಸುವ ರಸ್ತೆ ಇಲ್ಲದ ಕಾರಣ, ಮೃತದೇಹವನ್ನು ಕೊಂಡೊಯ್ಯುವ ಸಂದರ್ಭದಲ್ಲೇ ನಿವಾಸಿಗಳು ತೀವ್ರ ತೊಂದರೆ ಅನುಭವಿಸಬೇಕಾಗಿರುವುದು ಬೆಳಕಿಗೆ ಬಂದಿದೆ.

ಅಂತ್ಯಸಂಸ್ಕಾರಕ್ಕೂ ರೈಲ್ವೆ ಹಳಿ ದಾಟಬೇಕಾದ ಸ್ಥಿತಿ

ಸೋಮಿನಕೊಪ್ಪ ಭೋವಿ ಕಾಲೋನಿಯ ಸ್ಮಶಾನಕ್ಕೆ ತೆರಳಲು ಸೂಕ್ತ ರಸ್ತೆ ವ್ಯವಸ್ಥೆ ಇಲ್ಲದೆ, ಅಂತ್ಯಸಂಸ್ಕಾರ ಸಂದರ್ಭದಲ್ಲಿ ಮೃತದೇಹವನ್ನು ಹೊತ್ತುಕೊಂಡು ಹೋಗುವ ಜನರು ಕಲ್ಲು-ಮುಳ್ಳುಗಳ ನಡುವೆ ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಲ್ಲದೆ, ಸ್ಮಶಾನಕ್ಕೆ ಹೋಗಲು ರೈಲ್ವೆ ಹಳಿ ದಾಟಲೇಬೇಕಾದ ಅನಿವಾರ್ಯತೆ ಇರುವುದರಿಂದ ಜನರ ಸುರಕ್ಷತೆಗೆ ದೊಡ್ಡ ಧಕ್ಕೆ ಉಂಟಾಗಿದೆ.

ಮಳೆಗಾಲದಲ್ಲಿ ಮತ್ತಷ್ಟು ಕಷ್ಟ

ಮಳೆಗಾಲದ ಸಮಯದಲ್ಲಿ ಈ ಸಮಸ್ಯೆ ಇನ್ನಷ್ಟು ಗಂಭೀರವಾಗುತ್ತದೆ. ಗಿಡಗಂಟಿಗಳು, ಜುಳ್ಳುಗಳು ಹಾಗೂ ಕೆಸರು ತುಂಬಿರುವ ಮಾರ್ಗದಲ್ಲಿ ಮೃತದೇಹವನ್ನು ಸಾಗಿಸುವುದು ಅತ್ಯಂತ ಕಷ್ಟಕರವಾಗುತ್ತದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈಲ್ವೆ ಕೋಚಿಂಗ್ ಡಿಪೋ ಹಿನ್ನೆಲೆ – ಅಂಡರ್‌ಪಾಸ್ ಅಗತ್ಯ

ಸಮೀಪದ ಕೋಟೆಗಂಗೂರು ಪ್ರದೇಶದಲ್ಲಿ ರೈಲ್ವೆ ಕೋಚಿಂಗ್ ಡಿಪೋ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಭವಿಷ್ಯದಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಈಗಿರುವ ಸಮಸ್ಯೆ ಮುಂದಿನ ದಿನಗಳಲ್ಲಿ ಮತ್ತಷ್ಟು ಗಂಭೀರವಾಗುವ ಮುನ್ನ ಅಂಡರ್‌ಪಾಸ್ ನಿರ್ಮಿಸಬೇಕೆಂಬ ಬೇಡಿಕೆ ಸ್ಥಳೀಯರಿಂದ ಕೇಳಿಬಂದಿದೆ.

ಅಂಡರ್‌ಪಾಸ್ ನಿರ್ಮಾಣದಿಂದ ಹಲವರಿಗೆ ಲಾಭ

ಈ ಭಾಗದಲ್ಲಿ ಅಂಡರ್‌ಪಾಸ್ ನಿರ್ಮಾಣವಾದರೆ ಸೋಮಿನಕೊಪ್ಪ ಭೋವಿ ಕಾಲೋನಿ ಮಾತ್ರವಲ್ಲದೆ ಕೋಟೆಗಂಗೂರು, ತ್ಯಾವರೆಕೊಪ್ಪ ಹಾಗೂ ಪಶುವೈದ್ಯಕೀಯ ಕಾಲೇಜಿಗೆ ತೆರಳುವ ಸಾರ್ವಜನಿಕರಿಗೂ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ರೈಲ್ವೆ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಸಂಸದರಿಗೆ ಮನವಿ

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ಮುಂದಾಳತ್ವದಲ್ಲಿ ಜಿಲ್ಲೆಯಲ್ಲಿ ಹಲವೆಡೆ ರೈಲ್ವೆ ಅಂಡರ್‌ಪಾಸ್‌ಗಳು ನಿರ್ಮಾಣಗೊಂಡಿವೆ. ಇದೇ ಮಾದರಿಯಲ್ಲಿ ಸೋಮಿನಕೊಪ್ಪ ಭೋವಿ ಕಾಲೋನಿ ಪ್ರದೇಶದಲ್ಲಿಯೂ ಅಂಡರ್‌ಪಾಸ್ ನಿರ್ಮಿಸಿ, ಸ್ಮಶಾನಕ್ಕೆ ಸಂಪರ್ಕ ರಸ್ತೆ ಕಲ್ಪಿಸಬೇಕೆಂದು ನಿವಾಸಿಗಳು ಮನವಿ ಸಲ್ಲಿಸಿದ್ದಾರೆ.

“ನಮ್ಮ ಜನರಿಗೆ ಸತ್ತ ಮೇಲೂ ನೆಮ್ಮದಿ ಇಲ್ಲ. ಅಂತ್ಯಸಂಸ್ಕಾರಕ್ಕೆ ಹೋಗಲು ರಸ್ತೆ ಇಲ್ಲ. ಸ್ಮಶಾನದಲ್ಲಿ ಕಲ್ಲು-ಮುಳ್ಳುಗಳು, ಗಿಡಗಂಟಿಗಳು ತುಂಬಿವೆ. ನಮ್ಮ ಸಂಕಷ್ಟವನ್ನು ಅರಿತು ಸಂಸದರು ತಕ್ಷಣ ಕ್ರಮ ಕೈಗೊಳ್ಳಬೇಕು,
– ಈರಪ್ಪ, ಸ್ಥಳೀಯ ಹಿರಿಯ ಮುಖಂಡ

“ಸ್ಮಶಾನಕ್ಕೆ ಸಂಪರ್ಕ ರಸ್ತೆ ನಿರ್ಮಾಣ ಹಲವು ವರ್ಷಗಳ ಬೇಡಿಕೆ. ಪ್ರತಿಸಾರಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು,”
-ಎಸ್.ಎಂ. ಸುರೇಶ್

ತುರ್ತು ಕ್ರಮಕ್ಕೆ ಆಗ್ರಹ

ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ, ಅಂಡರ್‌ಪಾಸ್ ನಿರ್ಮಾಣ ಹಾಗೂ ಸ್ಮಶಾನಕ್ಕೆ ಸೂಕ್ತ ಸಂಪರ್ಕ ರಸ್ತೆ ಕಲ್ಪಿಸುವ ಮೂಲಕ ಹಲವು ವರ್ಷಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸೋಮಿನಕೊಪ್ಪ ಭೋವಿ ಕಾಲೋನಿ ನಿವಾಸಿಗಳು ಆಗ್ರಹಿಸಿದ್ದಾರೆ.

Tags: it is necessary to cross the railway tracks for the funeralkannada newslatest newsmalnad newsshimogashivamoggaThere is no road to go to the cemetery!ಶಿವಮೊಗ್ಗ
Previous Post

ಔಷಧ ಮಹಾವಿದ್ಯಾಲಯದಲ್ಲಿ 2ನೇ ರಾಷ್ಟ್ರೀಯ ಫಾರ್ಮಕಾಲಜಿ ದಿನಾಚರಣೆ 

Next Post

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಕಳಚಿದ ಟಯರ್, ಕಳಚಿ ಬಿದ್ದದ್ದು ಹೇಗೆ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಕಳಚಿದ ಟಯರ್, ಕಳಚಿ ಬಿದ್ದದ್ದು ಹೇಗೆ?

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಕಳಚಿದ ಟಯರ್, ಕಳಚಿ ಬಿದ್ದದ್ದು ಹೇಗೆ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL