ಶಿವಮೊಗ್ಗ: ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕಾರಣದಿಂದ ಗ್ರಾಹಕರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಗಾಬರಿ, ಆತಂಕ ಪಡದೇ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲೆಯ ಗ್ರಾಹಕರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ, ಕಾಲುವೆಗೆ ಈಜಲು ಹೋಗಿದ್ದ ಬಾಲಕ ಶವವಾಗಿ ಪತ್ತೆ, ಕುಟುಂಬಸ್ಥರ ಆಕ್ರಂದನ!
ಹೆಚ್ಚಿನ ಗ್ರಾಹಕರು ಒಂದು ರಿಫಿಲ್ಲಿಂಗ್ ಸಿಲಿಂಡರ್ ಪಡೆದ ನಂತರ ಸಿಂಗಲ್ ಗೃಹ ಬಳಕೆ ಸಿಲಿಂಡರ್‌ಗಾಗಿ 25 ದಿನಗಳ ಅಂತರದ ನಂತರ ಮತ್ತು ಡಬ್ಬಲ್ ಸಿಲಿಂಡರ್ ಗೃಹ ಬಳಕೆಯವರು 30 ದಿನಗಳ ನಂತರ ಮತ್ತೊಂದು ಸಿಲಿಂಡರ್‌ಗಾಗಿ ಬುಕ್ಕಿಂಗ್ ಮಾಡಬೇಕು. ಅದಕ್ಕೂ ಮುಂಚಿತವಾಗಿ ಬುಕ್ಕಿಂಗ್ ಮಾಡಬಾರದು. ಎಲ್.ಪಿ.ಜಿ ಅಡುಗೆ ಅನಿಲ ಸಿಲಿಂಡರ್‌ಗೆ ಸಂಬAಧಿಸಿದAತೆ ಉಪನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಶಿವಮೊಗ್ಗ ಇಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಮೊ.ಸಂ:9148267229 ಮತ್ತು 9844214270ಗೆ ಕರೆ ಮಾಡಿ ಗ್ರಾಹಕರು ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














