ಶಿವಮೊಗ್ಗ: ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ. ಆದಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿರುವ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.
ಇದನ್ನೂ ಓದಿ > ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬಂದ ವ್ಯಕ್ತಿಗೆ ಕಾದಿತ್ತು ಶಾಕ್!, ಆಗಿದ್ದೇನು?
ಮುಂಬರುವ ದಿನಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಜಲಾಶಯ ಭರ್ತಿಯಾದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಆಯೋಜಿಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ > ಜು.05 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಕಟ್, ಎಲ್ಲೇಲ್ಲಿ?














