ಶಿವಮೊಗ್ಗ: ಶಿವಮೊಗ್ಗ ಎಂ.ಆರ್.ಎಸ್.110/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಆ.25 ರಂದು ಬೆಳಗ್ಗೆ 09 ರಿಂದ ಸಂಜೆ 5 ರವರೆಗೆ ಬಿ.ಹೆಚ್.ರಸ್ತೆ, ಗಾಂಧಿಬಜಾರ್, ಕೋಟೆ ರಸ್ತೆ, ಓಬಿಎಲ್ ರಸ್ತೆ, ಸಿಎಲ್ ರಾಮಣ್ಣ ರಸ್ತೆ, ಅಶೋಕ ರಸ್ತೆ, ಪೆನ್ಷನ್ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ, ಎಲೆರೇವಣ್ಣ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶ ಮತ್ತು ಚಿಕ್ಕಲ್, ಗುರುಪುರ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್.ಎಸ್. ಕಾಲೋನಿ, ಹರಿಗೆ ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆಯ ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತ, ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ,
ಇದನ್ನೂ ಓದಿ > > ಚಾಕು ತೋರಿಸಿ ದರೋಡೆ, ಇಬ್ಬರನ್ನು ಬಂಧಿಸಿದ ಪೊಲೀಸರು!
ಸರ್.ಎಮ್.ವಿ.ರಸ್ತೆಯ ವೀರಭದ್ರೇಶ್ವರ ಚಿತ್ರಮಂದಿರದಿಂದ ಮಹಾವೀರ ವೃತ್ತದವರೆಗೆ, ಬಾಲ್ರಾಜ್ ಅರಸು ರಸ್ತೆಯ ಮಹಾವೀರ ವೃತ್ತದಿಂದ ಗೋಪಿ ವೃತ್ತದವರೆಗೆ, ಗಾಂಧಿ ಪಾರ್ಕ್, ಲೂರ್ದೂ ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > > 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಗ್ರಾಮಾಂತರ ಪೊಲೀಸರು














