ತೀರ್ಥಹಳ್ಳಿ: ತಾಲೂಕಿನ ಬಾಳಗಾರು ಸಮೀಪ ಮಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರೊಂದು ಭಾರಿ ಮಳೆಯ ನಡುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದ ಘಟನೆ ಸಂಭವಿಸಿದೆ.
ಇದನ್ನೂ ಓದಿ > > ನಕಲಿ ಬಂಗಾರದ ನಾಣ್ಯ ನೀಡಿ ವಂಚನೆ, ನಗದು ಸಹಿತ ಆರೋಪಿ ವಶಕ್ಕೆ
ಕಾರು ಮುಳುಗುತ್ತಿದ್ದಂತೆಯೇ ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಸಮಯಪ್ರಜ್ಞೆ ಮೆರೆದು ವಾಹನದಿಂದ ಹೊರಬಂದು ಈಜಿಕೊಂಡು ದಡ ಸೇರಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ > > ರೂಪಕ್ಕಿಂತ ಗುಣವೇ ಆತ್ಮದ ಸ್ಪಂದನ : ಜಿ.ಎಸ್.ನಾರಾಯಣ ರಾವ್
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಈ ಘಟನೆ ಮಾಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ > > ರಾಜ್ಯ ಸರ್ಕಾರದಿಂದ ನೇಮಕಾತಿ ಪರೀಕ್ಷೆಗಳಲ್ಲಿ ಸರಣಿ ಹಗರಣ!: ಡಾ. ಧನಂಜಯ ಸರ್ಜಿ ವಾಗ್ದಾಳಿ














