ತೀರ್ಥಹಳ್ಳಿ: ವರದಕ್ಷಿಣೆ ಕಿರುಕುಳದ ಪ್ರಕರಣದಲ್ಲಿ ಪತಿ ಹಾಗೂ ಅತ್ತೆಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಜ್ಯೋತಿ (24) ಅವರು 2021ರ ಮೇ 23ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದನ್ನೂ ಓದಿ > > ಮನೆ ಮೇಲೆ ಪಲ್ಟಿಯಾದ ಪ್ರವಾಸಿ ಬಸ್, ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು!
ಪತಿ ದಯಾನಂದ್ (37) ಹಾಗೂ ಅತ್ತೆ ಸುಮಿತ್ರಾ (65) ಹೆಚ್ಚುವರಿ ವರದಕ್ಷಿಣೆಗಾಗಿ ಜ್ಯೋತಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪದಡಿ ಪ್ರಕರಣ ದಾಖಲಾಗಿತ್ತು.
ಆಗಿನ ಡಿವೈಎಸ್‌ಪಿ ಶಾಂತವೀರ್ ಇ. ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
ಇದನ್ನೂ ಓದಿ > > ಶಿವಮೊಗ್ಗ, ಕೆಎಸ್‌ಆರ್‌ಟಿಸಿ ಬಸ್-ಟ್ರ್ಯಾಕ್ಸ್ ಡಿಕ್ಕಿ, 8 ಮಂದಿಗೆ ಗಾಯ!
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಯಶವಂತ ಕುಮಾರ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರಿಗೆ ತಲಾ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಇಬ್ಬರಿಗೂ ಒಟ್ಟು 2.24 ಲಕ್ಷ ದಂಡ ವಿಧಿಸಲಾಗಿದೆ.
ದಂಡದ ಮೊತ್ತದಲ್ಲಿ 2 ಲಕ್ಷವನ್ನು ಮೃತ ಜ್ಯೋತಿಯ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಅಭಿಯೋಜಕಿ ಮಮತಾ ಬಿ.ಎಸ್. ವಾದ ಮಂಡಿಸಿದ್ದರು.
ಇದನ್ನೂ ಓದಿ > > ಮನೆ ಮೇಲೆ ಪಲ್ಟಿಯಾದ ಪ್ರವಾಸಿ ಬಸ್, ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು!















