ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಕಲ್ಗುಂಡಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನು ತಡೆದ ಸ್ಥಳೀಯರು, ಇಬ್ಬರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ.
ಇದನ್ನೂ ಓದಿ > > ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?
ವಾಹನದಲ್ಲಿದ್ದ 8 ರಿಂದ 10 ಗೋವುಗಳನ್ನು ರಕ್ಷಿಸಲಾಗಿದ್ದು, ಬಂಧಿತ ಆರೋಪಿಯನ್ನು ಕುಂದಾಪುರ ಮೂಲದ ಇಲಿಯಾಸ್ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಮತ್ತಿಬ್ಬರು ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ರಸ್ತೆಯಲ್ಲಿ ಓಡಾಡುವ ಹಾಗೂ ಮಲಗುವ ದನಗಳಷ್ಟೇ ಅಲ್ಲದೆ, ಸ್ಥಳೀಯ ಗೋಶಾಲೆಗಳಿಂದಲೇ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿ ದೂರು ನೀಡಿದ್ದಾರೆ. ಈ ಆರೋಪದಿಂದಾಗಿ ಪ್ರಕರಣ ಈಗ ಮತ್ತಷ್ಟು ಕುತೂಹಲ ಹಾಗೂ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಇದನ್ನೂ ಓದಿ > > ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ
ವಶಪಡಿಸಿಕೊಂಡ ವಾಹನ ಮತ್ತು ಗೋವುಗಳನ್ನು ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಪೊಲೀಸ್ ಠಾಣೆಯ ಎದುರು ಇರಿಸಲಾಗಿದ್ದು, ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.













