ಆನಂದಪುರ : ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಕಾಡಿನಲ್ಲಿ ನಡೆಯುತ್ತಿದ್ದ ತೂರಬಿಲ್ಲೆ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ಸಂತೋಷ್, ಶಿವು, ಶಾಬಾಷ್ ಎಂದು ಗುರುತಿಸಲಾಗಿದೆ.
ಜುಲೈ 12ರಂದು ಮಧ್ಯಾಹ್ನ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ತೂರಬಿಲ್ಲೆ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ಪ್ರವೀಣ್ ದಾಳಿ ನಡೆಸಿದರು.
ಇದನ್ನೂ ಓದಿ > > ಸಿಟಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ ಪೊಲೀಸರು, ಕಟ್ಟುನಿಟ್ಟಿನ ಸೂಚನೆ
ದಾಳಿಯ ವೇಳೆ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದು, ಇತರೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಧಿತರಿಂದ ಜೂಜಾಟಕ್ಕೆ ಬಳಸಲಾಗುತ್ತಿದ್ದ 4,200 ನಗದು ಹಾಗೂ 1 ಮುಖಬೆಲೆಯ ಎರಡು ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ > > ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ, ಹಲ್ಕೆ- ಮುಪ್ಪಾನೆ ಲಾಂಚ್ ಸೇವೆ ಪುನರಾರಂಭ
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ














