ತೀರ್ಥಹಳ್ಳಿ : ಗುಡ್ಡ ಕುಸಿದು ಮೂವರು ಸಾವನ್ನಪ್ಪಿರುವ ದುರ್ಘಟನೆ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರ ನಸುಕಿನ ವೇಳೆ ನಡೆದಿದೆ.
ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದ್ದು ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ > > ಮಲೆನಾಡಲ್ಲಿ ಮಳೆ ಅಬ್ಬರ, ಕೋಡಿ ಬಿದ್ದ ಅಂಜನಾಪುರ ಜಲಾಶಯ!
ಮೃತ ದುರ್ದೈವಿಗಳನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮ ಮೂಲದ ಮಲ್ಲಿಕಾರ್ಜುನ (35) ನಾಗವೇಣಿ (28), ಸಂತೋಷ (3) ಎಂದು ಗುರುತಿಸಲಾಗಿದೆ. ಮೂವರ ಶವಗಳು ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದು ಹೊರ ತೆಗೆಯಲು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳು ಹರಸಾಹಸ ಪಟ್ಟರು.
ಇದನ್ನೂ ಓದಿ > > 1.10 ಲಕ್ಷ ಮೌಲ್ಯದ ಕೇಬಲ್ ಕದ್ದಿದ್ದ ಖದೀಮರು ಪೊಲೀಸರ ಬಲೆಗೆ!
ಪಕ್ಕದ ಶೆಡ್ ನಲ್ಲಿದ್ದವರಿಗೆ ಗಂಭೀರ ಗಾಯವಾಗಿದ್ದು ಅವರನ್ನ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ > > ಮುಂದುವರೆದ ‘ಆಪರೇಷನ್ ಫುಟ್‌ಪಾತ್’, ಜೈಲ್ ರಸ್ತೆಯಲ್ಲಿ ಅಕ್ರಮ ಒತ್ತುವರಿ ತೆರವು














