ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಐಗಿನಬೈಲು ಕ್ರಾಸ್ ಬಳಿ ಎದುರು-ಬದುರಿನಿಂದ ಬಂದ ಎರಡು ಕಾರುಗಳ ನಡುವೆ ನೇರ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಎರಡೂ ಕಾರುಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.
ಇದನ್ನೂ ಓದಿ > > ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಈ ಭೀಕರ ರಸ್ತೆ ಅಪಘಾತದಲ್ಲಿ ಕೇಶವ, ಸುರೇಶ್ ಹಾಗೂ ಶಶಿಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಧಾವಿಸಿ, ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ > > ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕುರಿತು ಬಿ.ವೈ. ವಿಜಯೇಂದ್ರ ಭವಿಷ್ಯ!
ಘಟನಾ ಸ್ಥಳಕ್ಕೆ ಆನಂದಪುರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ > > ವಿಮಾನ ಟಿಕೆಟ್ ಕೊಡುವುದಾಗಿ ಹೇಳಿ 11 ಲಕ್ಷ ರೂ. ವಂಚನೆ!













